ನವದೆಹಲಿ: ಇಂಡಿಯಾ ಎಂಬ ಹೆಸರನ್ನು ತೆಗೆದು ಭಾರತ್ ಎಂದು ಇಡಬೇಕು ಎಂಬ ವಾದ ಹಲವು ದಿನಗಳಿಂದಲು ನಡೆಯುತ್ತಲೆ ಇದೆ. ಸಾಕಷ್ಟು ಪರ ವಿರೋಧವೂ ಎದ್ದಿದೆ. ಇದರ ನಡುವೆ ಮಕ್ಕಳ ಶಾಲಾ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು ಭಾರತ್ ಎಂದು ಬಳಸಿ ಎಂಬ ಸೂಚನೆಯನ್ನು ಎನ್ ಸಿ ಇ ಆರ್ ಟಿ ಸೂಚನೆ ನೀಡಿದೆ
ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್, ಈಗಾಗಲೇ ಉನ್ನತಮಟ್ಟದ ಸಮಿತಿಯ ಅನುಮೋದನೆಯನ್ನು ಪಡೆದಿದೆ. ಹೀಗಾಗಿಯೇ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು ಭಾರತ್ ಬಳಸಲು ಸೂಚನೆ ನೀಡಲಾಗಿದೆ. ಮುಂದಿನ ಪಠ್ಯಪುಸ್ತಕಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬದಲಿಸಲಾಗುತ್ತಿದೆ. ಅಷ್ಟೇ ಅಲ್ಲ ಪ್ರಾಚೀನ ಇತಹಾಸದ ಬದಲಿಗೆ ಶಾಸ್ತ್ರೀಯ ಇತಿಹಾಸ ಪರಿಚಯಿಸಲು ಅವಿರೋಧವಾಗಿ ಶಿಫಾರಸು ಮಾಡಿದೆ.
ಭಾರತ್ ಎಂಬುದು ಹಳೆಯ ಹೆಸರು. ಭಾರತ ಎಂಬ ಹೆಸರಿನ ಬಳಕೆಯು 7,000 ವರ್ಷಗಳಷ್ಟು ಹಳೆಯದು. ಅಂದರೆ ವಿಷ್ಣು ಪುರಾಣದಂತಹ ಪ್ರಾಚೀನ ಗ್ರಂಥಗಳಲ್ಲೂ ಕೂಡ ಅದರ ಉಲ್ಲೇಖವಿದೆ. ಹಾಗಾಗಿ, ಹೊಸ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿ ನೇಮಕ ಮಾಡಲಾಗಿದ್ದ ಏಳು ಸದಸ್ಯರ ಸಮಿತಿಯು ಸರ್ವಾನುಮತದಿಂದ ಈ ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ತಿಳಿಸಿದ್ದಾರೆ.