Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ರಾತ್ರೋರಾತ್ರಿ ಕುವೆಂಪು, ಅಪ್ಪು ಪುತ್ಥಳಿಯನ್ನು  ತೆರವುಗೊಳಿಸಿದ ಅಧಿಕಾರಿಗಳು..!

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.27 :  ಮಹಾಕವಿ ಕುವೆಂಪು ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿಯನ್ನು ಹಿರಿಯೂರು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಹಿರಿಯೂರು ನಗರದ ನಗರದ ರಂಜಿತಾ ಹೋಟೆಲ್ ಮುಂಭಾಗದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ಹಾಗೂ ಇಂದಿರಾ ಕ್ಯಾಂಟಿನ್ ಬಳಿ ನಟ ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಕ್ಟೋಬರ್ 3 ರಂದು ಅನಾವರಣಗೊಳಿಸಿದ್ದರು.

ಇದೀಗ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳು ರಾತ್ರೋರಾತ್ರಿ ಪುತ್ಥಳಿಗಳನ್ನು ತೆರವುಗೊಳಿಸಿದ್ದಾರೆ. ಮಾಹಿತಿ ತಿಳಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ಜೊತೆ ಕೆಲಕಾಲ ವಾಗ್ವಾದ ನಡೆಸಿದ್ದಾರೆ.

ಪುತ್ಥಳಿಗಳ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಕರವೇ ಪ್ರಧಾನ ಕಾರ್ಯದರ್ಶಿ ದಾದಾಪಿರ್ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಅಧಿಕಾರಿಗಳಿಂದಲೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment