ಸಿಎಂ ಸಿದ್ದರಾಮಯ್ಯ ಅವರ ಫೋಟೋವನ್ನು ಎಡಿಟ್ ಮಾಡುವ ಮೂಲಕ ಕಲೆಕ್ಷನ್ ಮಾಸ್ಟರ್ ಎಂದು ಪೋಸ್ಟ್ ಹಾಕಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಖ್ಯಮಂತ್ರಿ ಚೀಫ್ ಮಿನಿಸ್ಟರ್ ಎಂಬ ಪೋಸ್ಟರ್ ಅನ್ನು, ಕಲೆಕ್ಷನ್ ಮಿನಿಸ್ಟರ್ ಎಂದು ಪೋಸ್ಟ್ ಹಾಕಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹರಿದು ಬಿಟ್ಟಿದ್ದರು.
ಈ ಸಂಬಂಧ ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ ಶೇಕರ್ ಕುಕ್ಕೇಡಿ ದೂರು ನೀಡಿದ್ದರು. ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ರಾಜ್ಯದ ಮುಖ್ಯಮಂತ್ರಿಯನ್ನು ಅವಮಾನ ಮಾಡುವ ಉದ್ದೇಶದಿಂದ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ರೇಕಿಸಿ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಶಾಂತಿ ಕೆಡಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಕ್ಕೇಡಿ ದೂರಿನಲ್ಲಿ ತಿಳಿಸಿದ್ದಾರೆ.
ಸಿಎಂ ಕಚೇರಿ, ಗೃಹ ಕಚೇರಿ ಮತ್ತು ಸಿಎಂ ನಿವಾಸದ ಗೇಟ್ ಗೆ ಕಲೆಕ್ಷನ್ ಬೋರ್ಡ್ ಅಂಟಿಸಿರುವಂತೆ, ಫೋಟೋ ಎಡಿಟ್ ಮಾಡು ಹಾಕಲಾಗಿದೆ. ಈ ಫೋಟೋಗಳನ್ನು ಹರೀಶ್ ಪೂಂಜಾ ತಮ್ಮ ಸೋಷಿಯಲ್ ಮೀಡಿಯಾದಲ್ಲೆಲ್ಲಾ ಹಂಚಿಕೊಂಡಿದ್ದಾರೆ. ಇದೀಗ ದೂರು ದಾಖಲಾಗಿದ್ದು, ಅವರ ಮೇಲೆ ದಾಖಲಾದ ಎರಡನೇಯ ಎಫ್ಐಆರ್ ಆಗಿದೆ. ಇತ್ತಿಚೆಗೆ ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ, ತೆರವು ಜಟಾಪಟಿಯ ವಿಚಾರವಾಗಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಮತ್ತೊಂದು ಎಫ್ಐಆರ್ ದಾಖಲಾಗಿದೆ.