Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಭೋವಿ ಸಮಾಜದ ನಿಯೋಗ

---Advertisement---

ಬೆಂಗಳೂರು, ಅಕ್ಟೋಬರ್ 27: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ಭೋವಿ ಜನಾಂಗದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ಸಮಾಜದ ಮುಖಂಡರು ಮಾತನಾಡಿ ಸಾಮಾಜಿಕ ಶ್ರೇಯೋಭಿವೃದ್ಧಿಗೆ ಭೋವಿ ಅಭಿವೃದ್ಧಿ ನಿಗಮ ಸ್ಥಾಪನೆ ಯಾಗಿದ್ದು, ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ, ವಿಧಾನಪರಿಷತ್ ಸದಸ್ಯ ಸ್ಥಾನ ದೊರಕಬೇಕು ಎಂದು ಬೇಡಿಕೆ ಇಟ್ಟರು.

ಭೋವಿ ಸಮಾಜದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಕುರಿತು ಪಕ್ಷದ ವರಿಷ್ಠರೊಂದಿಗೆ ಗಂಭೀರವಾಗಿ ಚರ್ಚೆ ಮಾಡಲಾಗುವುದು, ವಸ್ತು ಸ್ಥಿತಿ ವಿವರಿಸಲಾಗುವುದು ಎಂದು ಭರವಸೆ ನೀಡಿದರು.

ಭೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಮಾಜ ಕಲ್ಯಾಣ ಸಚಿವ ಡಾ: ಹೆಚ್ .ಸಿ ಮಹದೇವಪ್ಪ, ಮಾಜಿ ಸಚಿವ ವೆಂಕಟರಮಣನಪ್ಪ, ಶಾಸಕ ವೆಂಕಟೇಶ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...