Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವರ್ತೂರು ಸಂತೋಷ್ ಗೆ ಜಾಮೀನು : ಬಿಗ್ ಬಾಸ್ ಮನೆ ಎಂಟ್ರಿಯಾಗೋದು ಬಹುತೇಕ ಕನ್ಫರ್ಮ್

---Advertisement---

ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವರ್ತೂರು ಸಂತೋಷ್ ಗೆ ಜಾಮೀನು ಸಿಕ್ಕಿದೆ. ಬೆಂಗಳೂರಿನ 2ನೇ ಎಪಿಎಂಎಂ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಇದೀಗ ಮತ್ತೆ ವಾಪಾಸ್ ಬಿಗ್ ಬಾಸ್ ಮನೆಗೆ ಹೋಗ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ವರ್ತೂರು ಸಂತೋಷ್ ಬಿಗ್ ಬಾಸ್ ಸೀಸನ್ 10ರ ಮನೆಯಲ್ಲಿ ಸ್ಪರ್ಧಿಯಾಗಿದ್ದಾರೆ. ರೈತನಾಗಿ ಬಂದಿರುವ ವರ್ತೂರು ಸಂತೋಷ್, ಮೈತುಂಬಾ ಒಡವೆ ಹಾಕಿದ್ದರು. ಇದರಲ್ಲಿ ಹುಲಿ ಉಗುರು ಇರುವಂತ ಪೆಂಡೆಂಟ್ ಹಾಕಿದ್ದರು. ಇದನ್ನು ಗಮನಿಸಿದ್ದ ಅರಣ್ಯಾಧಿಕಾರಿಗಳು ಬಂಧಿಸಿದ್ದರು.

ಇಂದು ಜಾಮೀನು ಸಿಕ್ಕಿದೆ. ಮಾಹಿತಿಗಳ ಪ್ರಕಾರ ವರ್ತೂರು ಸಂತೋಷ್ ಮತ್ತೆ ಬಿಗ್ ಬಾಸ್ ಗೆ ಹೋಗಲಿದ್ದಾರೆ. ಈಗಾಗಲೇ ಪೊಲೀಸ್ ಠಾಣೆಯ ಬಳಿಯೆ ಬಿಗ್ ಬಾಸ್ ವಾಹನ ಹೋಗಿದೆ ಎನ್ನಲಾಗಿದೆ. ನೂರು ದಿನಗಳ ಆಟದಲ್ಲಿ ವರ್ತೂರು ಸಂತೋಷ್ ಮತ್ತೆ ಮುಂದುವರೆಯಲಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಬಿಗ್ ಬಾಸ್ ಗೆ ಹೋದರೆ ನಾಳೆಯ ಎಪಿಸೋಡ್ ನಲ್ಲಿ ವರ್ತೂರು ಸಂತೋಷ್ ಕಾಣಿಸಿಕೊಳ್ಳಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...