Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮನೆಗಳ ಮುಂದೆ ರಂಗೋಲಿ ಹಾಕಿ, ಗಾಳಿಪಟ ಹಾರಿಸಿ, ಹಣತೆ ಹಚ್ಚಿ, ಜ್ಯೋತಿ ಬೆಳಗಿಸಿ ಕನ್ನಡ ರಾಜ್ಯೋತ್ಸವ ಆಚರಿಸಿ :  ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮನವಿ

Facebook
Twitter
Telegram
WhatsApp

 

ಚಿತ್ರದುರ್ಗ. ಅ.29: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಮನೆಗಳ ಮುಂದೆ ರಂಗೋಲಿ ಹಾಕಿ, ಗಾಳಿಪಟಗಳನ್ನು ಹಾರಿಸಿ, ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವುದರೊಂದಿಗೆ ರಾಜ್ಯೋತ್ಸವ ಸಂಭ್ರಮ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ  ಮನವಿ ಮಾಡಿದ್ದಾರೆ.

ನವೆಂಬರ್ 1 ರಂದು ಜಿಲ್ಲೆಯ ಎಲ್ಲರೂ ತಮ್ಮ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷವಾಕ್ಯ ಬರೆಯುವಂತೆ ಅವರು ವಿನಂತಿಸಿದ್ದಾರೆ.

ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ  ರಾಜ್ಯದ ಎಲ್ಲ ಆಕಾಶವಾಣಿ ಕೇಂದ್ರಗಳಿಂದ (ರೇಡಿಯೋ) ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಜಿಲ್ಲೆಯ ಎಲ್ಲಾ  ನಾಗರಿಕರು ನಾಡಗೀತೆ ಪ್ರಸಾರವಾಗುವ ಸಂದರ್ಭದಲ್ಲಿ ಎದ್ದು ನಿಂತು  ಗೌರವ ಸಲ್ಲಿಸಬೇಕು.

ನವೆಂಬರ್ 1ರ ಸಂಜೆ‌ 5 ಗಂಟೆಗೆ ಜಿಲ್ಲೆಯ ಎಲ್ಲ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ‌ ಗಾಳಿಪಟ ಉತ್ಸವ ಆಚರಿಸಬೇಕು. ಅದೇ ರೀತಿ ನವೆಂಬರ್ 1ರ ಸಂಜೆ 7 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಚೇರಿಗಳು ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಬೇಕು.‌

ಜಿಲ್ಲೆಯ ಎಲ್ಲ ನಾಗರಿಕರು, ಸಂಘ-ಸಂಸ್ಥೆಗಳು ರಂಗೋಲಿ, ಗಾಳಿಪಟ ಉತ್ಸವ ಹಾಗೂ ಕನ್ನಡಜ್ಯೋತಿ ಬೆಳಗುವ ಮೂಲಕ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಜಿಲ್ಲೆಯ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!