Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾವಸಾರ ಕ್ಷತ್ರೀಯ ಸಮಾಜ ಶಿಕ್ಷಣ ಮತ್ತು ಸಂಘಟನೆಗೆ ಒತ್ತು ನೀಡಲಿ : ಶ್ರೀನಿವಾಸ ಪಿಸ್ಸೆ

Facebook
Twitter
Telegram
WhatsApp

ಚಿತ್ರದುರ್ಗ : ಅ.29: ಸಾಮಾಜಿಕ, ರಾಜಕೀಯ, ಆರ್ಥಿಕ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಹಿಂದುಳಿದಿರುವ ಭಾವಸಾರ ಕ್ಷತ್ರೀಯ ಸಮಾಜವು ರಾಜ್ಯದಲ್ಲಿ ಅಗತ್ಯವಿರುವ ಸ್ಥಾನಮಾನಗಳನ್ನು ಪಡೆದುಕೊಳ್ಳಲು ಶಿಕ್ಷಣ ಮತ್ತು ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಖಿಲ ಭಾರತ ಭಾವಸಾರ ಕ್ಷತ್ರೀಯ ಮಹಾಸಭಾದ ರಾಜ್ಯಾಧ್ಯಕ್ಷ ಶ್ರೀನಿವಾಸ ಪಿಸ್ಸೆ ಅವರು ಕರೆ ನೀಡಿದರು.

ಚಿತ್ರದುರ್ಗದ ಭಾವಸಾರ ಕ್ಷತ್ರೀಯ ಕಲ್ಯಾಣ ಮಂಟಪದಲ್ಲಿ, ಭಾನುವಾರದಂದು ಭಾವಸಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜಕ್ಕಾಗಿ ದುಡಿಯುತ್ತಿರುವ ಗಣ್ಯರಿಗೆ ಸನ್ಮಾನಿಸುವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಭಾವಸಾರ ಕ್ಷತ್ರೀಯ ಸಮಾಜದವರು ಬಹಳಷ್ಟು ಸಂಖ್ಯೆಯಲ್ಲಿದ್ದರೂ, ರಾಜಕೀಯ, ಸಾಮಾಜಿಕ ಮುಂತಾದ ಕ್ಷೇತ್ರಗಳಲ್ಲಿ ಸ್ಥಾನಮಾನಗಳನ್ನು ಪಡೆಯಲು ಸಾಧ್ಯವಾಗಿಲ್ಲ, ಸಮಾಜದವರು ಬಟ್ಟೆ ಹೊಲಿಯುವ ವೃತ್ತಿಯನ್ನೇ ಮಾಡುತ್ತ, ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷಿಸಿದ ಪರಿಣಾಮವಾಗಿ ಸಮಾಜ ಹಿಂದುಳಿದಿದೆ.  ಆದರೆ ಈಗ ಪರಿಸ್ಥಿತಿ ಬದಲಾಗಿದೆ.  ಹೀಗಾಗಿ ಭಾವಸಾರ ಕ್ಷತ್ರೀಯ ಸಮಾಜದವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಅದೇ ರೀತಿ ಸಂಘಟಿತರೂ ಆಗಬೇಕು.  ಸಮಾಜದ ಹಲವು ಕೈಂಕರ್ಯಗಳಲ್ಲಿ ಪಾಲ್ಗೊಳ್ಳಬೇಕು, ಒಬ್ಬರಿಗೊಬ್ಬರು ಬೆಂಬಲ ನೀಡುವಂತಾಗಬೇಕು.  ಸರ್ಕಾರದ ಗಮನ ಸೆಳೆಯುವ ರೀತಿಯಲ್ಲಿ ಸಂಘಟನಾ ಚಟುವಟಿಕೆಗಳನ್ನು ಕೈಗೊಳ್ಳಬೇಕು, ಆಗ ಮಾತ್ರ ಸರ್ಕಾರದಲ್ಲಿ ಸ್ಥಾನಮಾನಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ಅಖಿಲಭಾರತ ಭಾವಸಾರ ಕ್ಷತ್ರೀಯ ಮಹಾಸಭಾದ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಾಡಿನಾದ್ಯಂತ ಹಮ್ಮಿಕೊಳ್ಳಲಾಗುತ್ತದೆ.  ಇಂತಹ ಕಾರ್ಯಕ್ರಮಗಳಲ್ಲಿ ಸಮಾಜಬಾಂಧವರು ಭಾಗವಹಿಸಬೇಕು, ಆಗ ಮಾತ್ರ ಸಮಾಜದಲ್ಲಿ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲು ಸಾಧ್ಯ.  ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರ್ಕಾರದ ಹಲವು ಯೋಜನೆಗಳು ಜಾರಿಯಲ್ಲಿವೆ, ಸಮಾಜದವರು ಇದರ ಬಗ್ಗೆ ಮಾಹಿತಿ ಪಡೆಯುವ ಗೋಜಿಗೆ ಹೋಗುವುದೇ ಇಲ್ಲ.  ಹೀಗಾಗಿ ಯೋಜನೆಗಳ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ, ಸಮಾಜದವರು ಆರ್ಥಿಕವಾಗಿ ಸಬಲರೂ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಭಾವಸಾರ ಕ್ಷತ್ರೀಯ ಸಮಾಜದ ಸಾವಿರಾರು ಪದವೀಧರರಿದ್ದಾರೆ, ಆದರೆ ಬಹುತೇಕರು ಪದವೀಧರ ಕ್ಷೇತ್ರದ ವಿಧಾನಸಭಾ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಪಡೆದಿಲ್ಲ, ಏಕೆಂದರೆ ನೊಂದಣಿ ಮಾಡಿಸಿಲ್ಲ.  ಹೀಗಾಗಿ ತಪ್ಪದೆ ಸಮಾಜದ ಎಲ್ಲ ಪದವೀಧರರು ನೊಂದಣಿ ಮಾಡಿಸಿಕೊಳ್ಳಬೇಕು, ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರ ಮತದಾರರಿದ್ದರೆ, ಚುನಾವಣೆ ಸಂದರ್ಭದಲ್ಲಿ ನಮ್ಮ ಸಮಾಜವನ್ನೂ ಕೂಡ ಗುರುತಿಸುತ್ತಾರೆ ಎಂದರು.

ಭಾವಸಾರ ಕ್ಷತ್ರೀಯ ಸಮಾಜದ ಅಧ್ಯಕ್ಷ ಶ್ಯಾಮರಾವ್ ಮುಸಳೆ ಅವರು ಮಾತನಾಡಿ, ನಗರದಲ್ಲಿ ಭಾವಸಾರ ಕ್ಷತ್ರೀಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುವ ಕಾರ್ಯಕ್ರಮವನ್ನು ಕಳೆದೆರಡು ವರ್ಷಗಳಿಂದ ಮಾಡಲಾಗುತ್ತಿದೆ,  ಇದು ಇತರೆ ವಿದ್ಯಾರ್ಥಿಗಳಿಗೂ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡಲು ಸಹಕಾರಿಯಾಗಿದೆ.  ಇಂತಹ ಕಾರ್ಯಕ್ರಮಗಳಿಗೆ ಭಾವಸಾರ ಕ್ಷತ್ರೀಯ ಸಮಾಜ ಬಾಂಧವರು ಹೆಚ್ಚಿನ ರೀತಿಯಲ್ಲಿ ಧನ ಸಹಾಯ ಮಾಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ನಗರ ಹಾಗೂ ಗ್ರಾಮೀಣ ಪ್ರದೇಶಲ್ಲಿನ ಭಾವಸಾರ ಕ್ಷತ್ರೀಯ ಸಮಾಜದ ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.  ಅಲ್ಲದೆ ಆರ್‍ಟಿಇ ಕೋಟಾದಡಿ ಶಾಲೆಗಳಿಗೆ ಪ್ರವೇಶ ಪಡೆದ ಹಾಗೂ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಾಗೂ ಸಮಾಜಕ್ಕಾಗಿ ಗಣನೀಯ ಸೇವೆ ಸಲ್ಲಿಸುತ್ತಿರುವ ಚಿತ್ರದುರ್ಗದ ಸಿ.ಟಿ. ವಾಸುದೇವರಾವ್ ಮುಸಳೆ, ಪರಮೇಶ್ವರ ರಾವ್ ನಾಜರೆ, ಗಣೇಶ್ ಮೂರ್ತಿ ಅಂಬೇಕರ್, ತುಕಾರಾಂರಾವ್ ಬಿ.ವಿ., ಹಾಗೂ ಎಂ.ವಿ. ವಿನಾಯಕ ಮುಸಳೆ ಅವರನ್ನು ಭಾವಸಾರ ಕ್ಷತ್ರೀಯ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಮತಾ ಬೇದ್ರೆ, ಶ್ಯಾಮರಾವ್ ಮುಸಳೆ, ನಾಗರಾಜ್ ಬೇದ್ರೆ, ಶ್ರೀನಾಥ್ ಬೇದ್ರೆ ಸೇರಿದಂತೆ ಸಮಾಜದ ವಿವಿಧ ಪದಾಧಿಕಾರಿಗಳು, ಸಮಾಜ ಬಾಂಧವರು ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!