Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಆಂಧ್ರಪ್ರದೇಶದಲ್ಲಿ ಭೀಕರ ರೈಲು ಅಪಘಾತ : ಆರು ಮಂದಿ ಸಾವು, 20 ಕ್ಕೂ ಹೆಚ್ಚು ಮಂದಿಗೆ ಗಾಯ

---Advertisement---

ಸುದ್ದಿಒನ್ : ಆಂದ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ವಿಶಾಖದಿಂದ ಪಲಾಸಕ್ಕೆ ತೆರಳುತ್ತಿದ್ದ ವಿಶೇಷ ಪ್ಯಾಸೆಂಜರ್ ರೈಲು ಕೋತವಲಸ ಮಂಡಲದ ಅಲಮಂಡ – ಕಂಟಕಪಲ್ಲಿಯಲ್ಲಿ ಸಿಗ್ನಲ್‌ಗಾಗಿ ಹಳಿಯಲ್ಲಿ ನಿಂತಿತ್ತು. ಅದೇ ಸಮಯದಲ್ಲಿ ಹಿಂದೆ ಬಂದ ವಿಶಾಖ – ರಾಯಗಡ ಎಕ್ಸ್ ಪ್ರೆಸ್ ರೈಲು ಪಲಾಸ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 4 ಬೋಗಿಗಳು ಜಖಂಗೊಂಡಿವೆ. ಆರು ಮಂದಿ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸ್ಥಳದಲ್ಲಿ ಭೀಕರ ಪರಿಸ್ಥಿತಿ ಇದೆ. ಕತ್ತಲೆಯಲ್ಲಿ ಏನಾಯಿತು ಎಂದು ಅರ್ಥವಾಗದ ಪರಿಸ್ಥಿತಿಯಿದೆ. ಗಂಭೀರವಾಗಿ ಗಾಯಗೊಂಡವರು ಸಹಾಯಕ್ಕಾಗಿ ಅಳುತ್ತಿದ್ದಾರೆ. ಎರಡು ರೈಲುಗಳು ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿ ವಿದ್ಯುತ್ ತಂತಿ ತುಂಡಾಗಿ ಇಡೀ ಪ್ರದೇಶ ಕತ್ತಲೆಯಲ್ಲಿ ಆವರಿಸಿದೆ. ಇದರಿಂದ ಪರಿಹಾರ ಕಾರ್ಯಕ್ಕೆ ಅಡ್ಡಿಯಾಗಿದೆ.

ರೈಲು ಅಪಘಾತದ ಕುರಿತು ರೈಲ್ವೆ ಮಂಡಳಿಯ ಡಿಆರ್‌ಎಂ ಸೌರಭ್ ಪ್ರಸಾದ್ ಅವರು ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಜಯನಗರಂ ಜೊತೆಗೆ ವಿಶಾಖಪಟ್ಟಣಂ ಮತ್ತು ಅನಕಾಪಲ್ಲಿಯಿಂದ ತುರ್ತು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿಶಾಖ ಮತ್ತು ವಿಜಯನಗರಂ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಉತ್ತಮ ಚಿಕಿತ್ಸೆ ನೀಡಲು ಸಮೀಪದ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡುವಂತೆ ಸಿಎಂ ಜಗನ್ ಆದೇಶಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...