Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿ ಮಂಗಳವಾರ ಗ್ರಾ.ಪಂ.ಮಟ್ಟದಲ್ಲಿ ಜನತಾ ದರ್ಶನ | ಆಡಳಿತಕ್ಕೆ ಚುರುಕುಗೊಳಿಸಿ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗಿದೆ : ಶಾಸಕ ಬಿ.ಜಿ.ಗೋವಿಂದಪ್ಪ

Facebook
Twitter
Telegram
WhatsApp

 

ಚಿತ್ರದುರ್ಗ.ಅ.30: ಆಡಳಿತ ವ್ಯವಸ್ಥೆಗೆ ಚುರುಕು ಮೂಡಿಸಿ ಜನರು ಬಯಸಿದ್ದ ಬದಲಾವಣೆ ತರಲಾಗಿದೆ. ಜನತಾ‌‌ ದರ್ಶನ ಮಾದರಿಯಲ್ಲಿ, ತಾಲ್ಲೂಕು ಆಡಳಿತ ವತಿಯಿಂದ ಪ್ರತಿ ಮಂಗಳವಾರ ಗ್ರಾ.ಪಂ.ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಸೋಮವಾರ ಹೊಸದುರ್ಗ ನಗರದ ಶ್ರೀ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಜನರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ಸರ್ಕಾರ ರಚನೆಯಾದ ಆರು ತಿಂಗಳಲ್ಲಿ, ಜನರು ಆಡಳಿತದಲ್ಲಿ ಬಯಸಿದ್ದ ಬದಲಾವಣೆ ತಂದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜನರ ಮನೆ ಬಾಗಿಲಿಗೆ ಆಡಳಿತ ಕೊಂಡೊಯ್ಯುವ ಹಾಗೂ ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವ ಹೊಣೆ ತಾಲ್ಲೂಕು ಹಾಗೂ ಜಿಲ್ಲಾಡಳಿತದ ಮೇಲಿದೆ. ಜನತಾ ದರ್ಶನದ ಮೂಲಕ ಸಾರ್ವಜನಿಕರ  ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ. ‌ ಗ್ರಾಮ ಮಟ್ಟದಲ್ಲಿ ಪಿಡಿಓ, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿ, ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸಿದರೆ, ಜನರು ಜಿಲ್ಲಾ ಹಾಗೂ ರಾಜ್ಯ ಮಟ್ಟಕ್ಕೆ ಅಲೆಯುವುದು ತಪ್ಪುತ್ತದೆ. ಜನರ ಸಮಸ್ಯೆಗಳಿಗೆ ಉತ್ತರ ಒದಗಿಸಲು, ಅಧಿಕಾರಿಗಳು ವಿಶ್ವವಿದ್ಯಾಲಯದಲ್ಲಿ ಪಿ.ಹೆಚ್.ಡಿ ಮಾಡುವ ಅಗತ್ಯವಿಲ್ಲ. ಜನರನೊಂದಿಗೆ ಬೆರತರೆ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಅಭಿಪ್ರಾಯ ಪಟ್ಟರು.

ಇ-ಆಪೀಸ್ ಉದ್ಘಾಟನೆ : ಆಡಳಿತದಲ್ಲಿ ಪಾದರ್ಶಕತೆ ತರಲು ಹಾಗೂ ತುರ್ತಾಗಿ ಜನರ ಅರ್ಜಿಗಳನ್ನು ವಿಲೇವಾರಿ ಮಾಡಲು ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ ಇ-ಆಪೀಸ್ ಉದ್ಘಾಟನೆ ಮಾಡಲಾಗಿದೆ. ಆರಂಭದಲ್ಲಿ ಅರ್ಜಿಗಳನ್ನು ಗಣಕೀಕರಣಗೊಳಿಸಿ, ಆನ್ ಲೈನ್ ಮೂಲಕವೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ರವಾನಿಸಲಾಗುವುದು. ತಾಲ್ಲೂಕಿನಲ್ಲಿ ಬಹಳಷ್ಟು ರೈತರು ಬಗರ್ ಹುಕುಂ ಅಡಿ ಸಾಗುವಳಿ ಜಮೀನು ಒಡೆತನಕ್ಕಾಗಿ ಅರ್ಜಿ ಸಲ್ಲಿಸಿದ್ದೀರಿ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ತಹಶೀಲ್ದಾರರಿಗೆ ನಿರ್ದೇಶನ ನೀಡಿದ್ದೇನೆ. ಕಂದಾಯ ಹಾಗೂ ಸರ್ವೇ ಇಲಾಖೆ ಅಧಿಕಾರಿಗಳು ಜಮೀನುಗಳ ಸರ್ವೇ ನಡೆಸಿ ವರದಿ ಸಲ್ಲಿಸುವರು. ಇದನ್ನು ಆಧರಿಸಿ ಬಗರ್ ಹುಂ ಸಭೆಯಲ್ಲಿ ಸಾಗುವಳಿ ಚೀಟಿ ನೀಡಲು ಕ್ರಮಕೈಗೊಳ್ಳಲಾಗುವುದು. ಕಳೆದ ಸರ್ಕಾರದ ಅವಧಿಯಲ್ಲಿ  94 ಸಿ ಹಾಗೂ 94 ಸಿಸಿ ಅಡಿ ಮನೆ ಹಕ್ಕುಪತ್ರ ನೀಡಲು ಅರ್ಜಿ ಸ್ವೀಕರಿಸಲಾಗಿದೆ. ಶೀಘ್ರವಾಗಿ  ಇದರ ಅಡಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಹಕ್ಕು ಪತ್ರಗಳನ್ನು ನೀಡಲಾಗುವುದು. ಈ ಕಾರ್ಯಗಳಿಗಾಗಿ ಜನರು ಜಿಲ್ಲಾಧಿಕಾರಿಗಳ ಕಚೇರಿ ಸುತ್ತುವ ಅಥವಾ ಮಧ್ಯವರ್ತಿಗಳನ್ನು ಹಿಡಿಯುವ ಅಗತ್ಯವಿಲ್ಲ. ನೇರವಾಗಿ ಅಧಿಕಾರಿಗಳನ್ನು ಭೇಟಿ  ಮಾಡಿದರೆ ಸಾಕು ಎಂದರು .

ಕುಡಿಯುವ ನೀರಿನ ಬಗ್ಗೆ ಕ್ರಮ ವಹಿಸಿ:  ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಿತ್ಯ ಕಚೇರಿಯಲ್ಲಿ ಇದ್ದು ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಬೇಕು. ಅನಗತ್ಯವಾಗಿ ಕೊಳೆ ಬಾವಿಗಳನ್ನು ಕೊರೆಸದೆ, ಹಿಂದಿನ ಕೊಳೆಬಾವಿಗಳಲ್ಲಿ ಲೈಫ್‌ ಗಳನ್ನು ಆಳಕ್ಕೆ ಇಳಿಸಿ ನೀರು ತೆಗೆಯುವ ಕೆಲಸ ಮಾಡಬೇಕು. ಭದ್ರಾ ಮೇಲ್ದಂಡೆ ಯೋಜನೆ ಭರದಿಂದ ಸಾಗಿದೆ. ಯೋಜನೆಗೆ ಹಣ ಕೊರತೆ ಇಲ್ಲ. ಯೋಜನೆಗೆ ಅಗತ್ಯವಾದ ಭೂ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ. ವೇದಾವತಿ ನದಿಗೆ ಭದ್ರಾ ನೀರು ಹರಿಸಬೇಕು ಎಂದು ಕಡೂರು, ತರಿಕೇರೆ ಹಾಗೂ‌ ಹೊಸದುರ್ಗ ತಾಲ್ಲೂಕು ಜನರು ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗುವ ವಿಶ್ವೇಶ್ವರಯ್ಯ ಜಲ ನಿಗಮದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಲಾಗುವುದು. ಯೋಜನೆ ಅನುಷ್ಠಾನದಿಂದ ಹೊಸದುರ್ಗ ತಾಲ್ಲೂಕಿನ 1.33 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಉಣಿಸಲಾಗುವುದು. ರೂ.350 ಕೋಟಿ‌ ವೆಚ್ಚದಲ್ಲಿ ಭದ್ರಾ ನದಿಯಿಂದ  ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆ ತ್ವರಿತವಾಗಿ ನಡೆಯುತ್ತಿದೆ. ಮಾರ್ಚ್ ವೇಳೆಗೆ ತಾಲೂಕಿನ 350  ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರು ನೀಡಲಾಗುವುದು‌. ತಾಲ್ಲೂಕಿನ 101 ಕೆರೆಗಳಿಗೆ ತುಂಗಾ ನದಿಯಿಂದ ನೀರು ಲಿಫ್ಟ್ ಮಾಡುವ ಕೆಲಸ ಆಗಬೇಕಿದ್ದು, ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದರು‌.

ತಾಲ್ಲೂಕಿ‌ನ ಸಮಸ್ಯೆಗಳಿಗೆ ಪರಿಹಾರ ಒದಗಿಸಿ :   ತಾಲ್ಲೂಕಿನಲ್ಲಿ ತೆಂಗು ಬೆಳೆಗೆ ತಗುಲಿದ ರೋಗ ನಿವಾರಣೆಗೆ ತೋಟಗಾರಿಕೆ ಇಲಾಖೆ ಪ್ರಯತ್ನಿಸಬೇಕು. ಕೃಷಿ ಇಲಾಖೆ ಬರಗಾಲದ ಬಗ್ಗೆ ನಿಖರ ಮಾಹಿತಿ‌ ಒದಗಿಸಿ ಪರಿಹಾರ ದೊರಕಿಸಿಕೊಡಬೇಕು. ಗ್ರಾಪಂ. ಗಳು ಗ್ರಾಮಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಹಗಲಿನಲ್ಲಿ ವಿದ್ಯುತ್ ಪೋಲು ಆಗದಂತೆ ಗ್ರಾಮ ಹಾಗೂ ಪಟ್ಟಣಗಳಲ್ಲಿ ನಿಗಾವಹಿಸಬೇಕು. ರೈತರ ಜಮೀನಿಗೆ ವಿದ್ಯುತ್ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಬಿ.ಜಿ.ಗೋವಿಂದಪ್ಪ ಈ ಸಂದರ್ಭದಲ್ಲಿ ಸೂಚನೆ ನೀಡಿದರು. ತಾಲ್ಲೂಕಿನಲ್ಲಿ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸುತ್ತಿದೆ. ಕೇವಲ 500 ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಜಾರಿ ಬಾಕಿದೆ. ಇವುಗಳನ್ನು ಜಾರಿ ಮಾಡಿ ಶೇ.100 ರಷ್ಟು ಸಾಧನೆ ಮಾಡಲಾಗುವುದು.ಗ್ರಾಮ ಸಭೆಯ ಮೂಲಕ ಫಲಾನುಭವಿಗಳನ್ನು  ಆಯ್ಕೆ ಮಾಡಿ ಮುಂದಿನ ವರ್ಷದಲ್ಲಿ ಮನೆಗಳನ್ನು ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಪ್ರಾಸ್ತಾವಿಕ ವಾಗಿ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಒಂದು ಹಾಗೂ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಎರೆಡು ಕಾರ್ಯಕ್ರಮ ಆಯೋಜಿಸಲಾಗುವುದು. ಸಾರ್ವಜನಿಕರು ಗ್ರಾಮೀಣ ಮಟ್ಟದ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾ ಮಟ್ಟಕ್ಕೆ ಬರುವುದನ್ನು ತಡಯುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಲಾಖೆವಾರು ಅರ್ಜಿಗಳನ್ನು ಸ್ವೀಕರಿಸಿ ಸ್ವೀಕೃತಿ ನೀಡಿಲಾಗುವುದು.ಅರ್ಜಿಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಪರಿಶೀಲನೆ ಮಾಡುವುದರ ಜೊತೆಗೆ ಅರ್ಜಿ ಸ್ಥಿತಿಗತಿಗಳ ಮೇಲೆ ನಿಗಾ ಇರಿಸಲಾಗುವುದು. ಕಂದಾಯ ಇಲಾಖೆಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಇ -ಆಪೀಸ್ ಅನುಷ್ಠಾನ ಮಾಡಲಾಗಿದೆ. ಅರ್ಜಿಗಳನ್ನು ಆರಂಭದಲ್ಲಿ ಕಂಪ್ಯೂಟರ್‌ನಲ್ಲಿ ದಾಖಲಿಸಿ ಅರ್ಜಿ ಸಂಖ್ಯೆ ನೀಡಲಾಗುವುದು. ಸಾರ್ವಜನಿಕರು ಈ ಸಂಖ್ಯೆ ನಮೂದಿಸಿ ಅರ್ಜಿಯ ಸ್ಥಿತಿಗತಿ ತಿಳಿದುಕೊಳ್ಳಬಹುದಾಗಿದೆ. ಅನಗತ್ಯವಾಗಿ ಜನರ ಅಲೆದಾಟ ತಪ್ಪಿಸಲು, ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಇ- ಆಪೀಸ್ ಅನುಷ್ಠಾನಕ್ಕೆ ತರಲಾಗಿದೆ ಎಂದರು.

ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಮಾತನಾಡಿ, ಸರ್ಕಾರದ  ಆಡಳಿತ ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಸಣ್ಣ ವಿಚಾರಗಳಿಗೆ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಕಳೆದ ಎರಡು ಜನತಾ ದರ್ಶನ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಸಂಬಂಧಿಸಿದ 52 ಅರ್ಜಿಗಳು ಸ್ವೀಕೃತವಾಗಿದ್ದವು. ಇವುಗಳ ಸಂಬಂದಪಟ್ಟ ಅಧಿಕಾರಿಗಳ ಮೂಲಕ ಇತ್ಯರ್ಥ ಮಾಡಲಾಗಿದೆ. ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅರ್ಜಿಗಳನ್ನು ಇತ್ಯರ್ಥ ಪಡಿಸುವಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.ತಾಲ್ಲೂಕು ಮಟ್ಟದಲ್ಲಿ ಬಗೆಹರಿಸಬಹುದಾದ ಸಣ್ಣ ಪುಟ್ಟ ವಿಚಾರಗಳಿಗೂ ಅರ್ಜಿಗಳು ಸ್ವೀಕರವಾಗಿದ್ದು ಬೇಸರದ ಸಂಗತಿ. ಅಧಿಕಾರಿಗಳು ಇಂತಹದಕ್ಕೆ ಎಡೆ ಮಾಡಿಕೊಡದೆ ಅರ್ಜಿಗಳನ್ನು ಶೀಘ್ರವಾಗಿ ಬಗೆಹರಿಸಬೇಕು. ಜಿಲ್ಲೆಯಲ್ಲಿ ತೀವ್ರ ಬರಗಾಲ ಎದುರಾಗಿದೆ. ಗ್ರಾಮೀಣ ಭಾಗದಲ್ಲಿ ಜನರು ಕುಡಿಯುವ ನೀರು ಪೋಲಾಗದಂತೆ ಸಾರ್ವಜನಿಕರು ಬಳಸಬೇಕು ಎಂದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸುಕನ್ಯಾ ಸಮೃದ್ಧಿ ಯೋಜನೆಯಡಿ ಪಾಸ್ ಬುಕ್ ವಿತರಿಸಲಾಯಿತು. ರೈತ ಆತ್ಮಹತ್ಯೆ ಪ್ರಕರಣದಲ್ಲಿ ರೈತನ ಪತ್ನಿಗೆ ಪಿಂಚಣಿ ಮಂಜೂರಾತಿ ಪತ್ರ ನೀಡಲಾಯಿತು. ವಿಕಲಚೇತನರ ಕಲ್ಯಾಣ ಇಲಾಖೆಯಿಂದ ಜಿಪಂ‌ ಅನುದಾನದಡಿ 03, ಡಿಎಂಎಫ್ ಅನುದಾನದಡಿ 04 ಸೇರಿದಂತೆ ಒಟ್ಟು 07 ಫಲಾನುಭವಿಗಳಿಗೆ ತ್ರಿ ಚಕ್ರವಾಹನಗಳನ್ನು ವಿತರಿಸಲಾಯಿತು. ಇಲಾಖೆವಾರು ಕೌಂಟರ್ ತೆರೆದು ಸಾರ್ವಜನಿಕರಿಂರ ಅರ್ಜಿ ಸ್ವೀಕರಿಸಲಾಯಿತು.

ಜಿಪಂ‌ ಸಿಇಒ ಸೋಮಶೇಖರ್, ಉಪವಿಭಾಗಧಿಕಾರಿ ಆರ್.ಕಾರ್ತೀಕ್ , ಸಮಾಜ ಕಲ್ಯಾಣ ಇಲಾಖೆ‌ ಉಪನಿರ್ದೇಶಕ ಜಗದೀಶ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಡಾ.ರೇಣುಪ್ರಸಾದ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಕೃಷಿ ಜಂಟಿ ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ,ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಓ.ಪರಮೇಶ್ವರಪ್ಪ, ಬೆಸ್ಕಾಂ ಎಇಇ ನಿರಂಜನ್ ಮೂರ್ತಿ, ತಹಸಿಲ್ದಾರ್ ತಿರುಪತಿ ಪಾಟೀಲ್, ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು  ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬದುಕಿನಲ್ಲಿ ರಂಗಭೂಮಿ ಉತ್ತಮ ಮಾರ್ಗದರ್ಶನ ನೀಡುತ್ತದೆ : ಡಾ.ಬಸವಕುಮಾರ ಸ್ವಾಮೀಜಿ

    ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22: ಜೀವನ ಒಂದು ನಾಟಕರಂಗ ನಾವುಗಳು ಅದರ ಪಾತ್ರಧಾರಿಗಳು. ಬದುಕಿನಲ್ಲಿ ನಾನಾ ಕಷ್ಟಸುಖಗಳು ಬರುತ್ತವೆ. ಅದಕ್ಕೆಲ್ಲಾ ಉತ್ತಮ ಮಾರ್ಗದರ್ಶನ ನೀಡುವುದು ರಂಗಭೂಮಿ ಮಾತ್ರ ಎಂದು ಎಸ್.ಜೆ.ಎಮ್. ವಿದ್ಯಾಪೀಠದ

ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?

ಮುರುಡೇಶ್ವರ: ರಾಜ್ಯದ ಉಪಚುನಾವಣೆ, ಮಹಾರಾಷ್ಟ್ರ ಎಲೆಕ್ಷನ್ ಮುಗಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೆ ಬಿಜಚ್ ಕಡೆಗೆ ಹೋಗಿದ್ದಾರೆ. ಮುರುಡೇಶ್ವರ ಬೀಚಗ ಸದ್ದಿನಲ್ಲಿ ಕೂತು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಇದೇ ವೇಳೆ ಸಂಪುಟ

ವಕ್ಫ್ ವಿರುದ್ದ ನವೆಂಬರ್ 25 ರಂದು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ : ಕರಿಕೆರೆ ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಭಾರತೀಯ ಕಿಸಾನ್ ಸಂಘದ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ

error: Content is protected !!