Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಕೊಂಡರಾ ನಟಿ ರೆಂಜೂಷಾ : ಪ್ರಾಥಮಿಕ ತನಿಖೆಯಲ್ಲಿ ತಿಳಿದ್ದೇನು..?

---Advertisement---

 

 

ಮಲಯಾಳಂ ನಟಿ ರೆಂಜೂಷಾ ಮೆನನ್ ಆತ್ಮಹತ್ಯೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ತಮ್ಮ ಅಪಾರ್ಟ್ಮೆಂಟ್ ನ ರೂಮೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಟಿಯ ಶವ ಪತ್ತೆಯಾಗಿದೆ. ಸಾಯುವ ಕೆಲವು ಗಂಟೆಗಳ ಮುಂಚೆ ರೆಂಜೂಷಾ ಮಾಡಿದ ರೀಲ್ಸ್ ಕೂಡ ಸಾಕಷ್ಟು ವೈರಲ್ ಆಗಿದೆ.

ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಾಥಮಿಕ ತನಿಖೆಯಲ್ಲಿ ಸಾಲದ ಸುಳಿಯಲ್ಲಿ ಸಿಕ್ಕಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರೆಂಜೂಷಾ ಹಾಗೂ ಆಕೆಯ ಪತಿ ಇಬ್ಬರು ಕಲಾವಿದರಾಗಿದ್ದರು. ಆದರೆ ಕಳೆದ ಎರಡು ವರ್ಷದಿಂದ ಇಬ್ಬರಿಗೂ ಅವಕಾಶಗಳು ಇರಲಿಲ್ಲ. ಹೀಗಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಸಾಲ ಹೆಚ್ಚಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿ ರೂಮ್​ಗೆ ಹೋಗಿ ಮಲಗಿದ್ದ ರೆಂಜೂಷಾ ಇಂದು ಎಷ್ಟೊತ್ತಾದ್ರೂ ಬಾಗಿಲು ತೆಗೆದಿರಲಿಲ್ಲ. ಕಾರಣ ತನ್ನ ಪೋಷಕರಿಗೆ ಅನುಮಾನ ಬಂದಿತ್ತು. ಬಳಿಕ ಹೇಗೋ ರೂಮಿನ ಬಾಗಿಲು ಮುರಿದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ನಟಿ ಶವ ಪತ್ತೆಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment