Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಮಿಳುನಾಡಿಗೆ ಮುಂದಿನ 15 ದಿನ ಕಾವೇರಿ ನೀರು ಹರಿಸಲು ಮತ್ತೆ ಸೂಚನೆ..!

---Advertisement---

ನವದೆಹಲಿ: ರಾಜ್ಯದಲ್ಲಿ ಭೀಕರ ಬರ ಬಂದಿದೆ. ಈಗಾಗಲೇ ಕಾವೇರಿ ಒಡಲಲ್ಲಿರುವ ನೀರು ಖಾಲಿಯಾಗುತ್ತಿದೆ. ಪರಿಸ್ಥಿತಿ ತೀರಾ ಶೋಚನೀಯವಾಗಿರುವಾಗಲೂ ಮುಂದಿನ 15 ದಿನಗಳ ಕಾಲ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸೂಚನೆ ನೀಡಲಾಗಿದೆ. ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

 

ಮುಂದಿನ 15 ದಿನಗಳ ಕಾಲ ಪ್ರತಿದಿನ 2,600 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಲಾಗಿದೆ. ಅಕ್ಟೋಬರ್ ಅಂತ್ಯದವರೆಗೂ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿತ್ತು. ಇದೀಗ ಅವಧಿ ಮುಕ್ತಾಯದ ಬಳಿಕ 2,600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ. ಕರ್ನಾಟಕದಿಂದ ನಿಜವಾದ ಪರಿಸ್ಥಿತಿಯನ್ನು ಅರ್ಥ ಮಾಡಿಸುವುದಕ್ಕೆ ಪ್ರಯತ್ನ ಪಟ್ಟರು, ಅದು ವ್ಯರ್ಥವಾಗುತ್ತಿದೆ.

ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಸದ್ಯಕ್ಕೆ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದೇ ಹೇಳಿದ್ದಾರೆ. ಕಾವೇರಿ ನೀರಿಗಾಗಿ ಕರ್ನಾಟಕದಲ್ಲಿ ಸಾಕಷ್ಟು ಹೋರಾಟಗಳು ನಡೆಯುತ್ತಿವೆ. ಇತ್ತಿಚೆಗಷ್ಟೇ ಕಾವೇರಿ ಹೋರಾಟಗಾರರು ಐವತ್ತು ದಿನದ ಕರಾಳ ದಿನವನ್ನು ಆಚರಣೆ ಮಾಡಿದ್ದಾರೆ. ಈಗಲೂ ಕಾವೇರಿಗಾಗಿ ಹೋರಾಟ ಮುಂದುವರೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment