Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐದು ಗ್ಯಾರೆಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಿ : ಶಾಸಕ ಕೆ.ಸಿ.ವಿರೇಂದ್ರ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ. 01 : ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರೆಂಟಿಗಳು ಉತ್ತಮವಾಗಿದ್ದು, ಇವುಗಳನ್ನು ಜನರ ಮನಕ್ಕೆ ತಲುಪುವಂತೆ ಕಾರ್ಯವನ್ನು ಮಾಡುವುದು ಅನಿವಾರ್ಯವಾಗಿದೆ ಇದು ಮುಂಬರುವ ಲೋಕಸಭಾ ಚುನಾವಣೆಗೆ ಅನುಕೂಲವಾಗಲಿದೆ ಎಂದು ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಆಚರಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕರು, ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ಮತದಾರರಿಗೆ ನೀಡಿದ ಭರವಸೆಯಂತೆ ಐದು ಗ್ಯಾರೆಂಟಿಗಳನ್ನು ಈಡೇರಿಸಿದೆ. ಇದನ್ನು ಮತದಾರರ ಮನಕ್ಕೆ ತಲುಪಿಸುವಂತ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕಿದೆ. ಈ ರೀತಿ ಮಾಡುವುದರಿಂದ ಮುಂಬರುವ ಲೋಕಸಭಾ ಚುನಾವಣೆಗೆ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ಇದರ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕಿದೆ ಎಂದು ಶಾಸಕ ವಿರೇಂದ್ರ ಪಪ್ಪಿ ಕರೆ ನೀಡಿದರು.

ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಕನ್ನಡ ರಾಜ್ಯೋತ್ಸವವನ್ನು ಚೆನ್ನಾಗಿ ಆಚರಣೆ ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ. ಅದರಂತೆ ನಾವುಗಳೆಲ್ಲಾ ನಮ್ಮ ಮನೆಯ ಮುಂದೆ ಕನ್ನಡದ ರಂಗೋಲಿಯನ್ನು ಹಾಕುವುದರ ಮೂಲಕ ರಾತ್ರಿ ದೀಪವನ್ನು ಬೆಳಗುವುದರ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಬೇಕಿದೆ ಎಂದರು.

ಡಿಸಿಸಿ ಅಧ್ಯಕ್ಷರಾದ ಎಂ.ಕೆ.ತಾಜ್‌ಪೀರ್ ಮಾತನಾಡಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಶಾಸಕರಿಲ್ಲದೆ ಸೂರಗಿತ್ತು, ಕಳೆದ 50 ವರ್ಷದಲ್ಲಿ ಈಗ ಮೂರನೇ ಅವದಿಯಲ್ಲಿ ಶಾಸಕರನ್ನು ಕಂಡಿದ್ದೇವೆ, ಶಾಸಕರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಸುವುದು ಖುಷಿಯಾದ ಸಂಗತಿಯಾಗಿದೆ. ರಾಜ್ಯ ಮಟ್ಟದಲ್ಲಿ ಶಾಸಕರಾದವರನ್ನು ಸೇರ್ಪಡೆ ಮಾಡುವಂತ ಕಾರ್ಯವನ್ನು ಮಾಡಲಾಗುವುದು ಉಳಿದವರನ್ನು ಜಿಲ್ಲಾ ಮಟ್ಟದಲ್ಲಿಯೇ ಸೇರಿಸಿಕೊಳ್ಳುವ ಕಾರ್ಯವನ್ನು ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಸೂಚನೆಯ ಮೇರೆಗೆ ಇಂದು ಹಲವಾರು ಜನರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 135 ಸ್ಥಾನಗಳನ್ನು ಗೆಲುವುದರ ಮೂಲಕ ದಾಖಲೆಯನ್ನು ಮಾಡಿದೆ ಇದೇ ರೀತಿ ಮುಂಬರುವ ಲೋಕಸಬಾ ಚುನಾವಣೆಯಲ್ಲಿಯೂ ಸಹಾ ರಾಜ್ಯದಲ್ಲಿ ಇರುವ 28 ಸ್ಥಾನಗಳಲ್ಲಿ ಅಧಿಕ ಸ್ಥಾನಗಳನ್ನು ಗೆಲ್ಲಬೇಕಿದೆ ಇದಕ್ಕೆ ಈಗಿನಿಂದಲೇ ತಯಾರಿಯನ್ನು ಮಾಡಿಕೊಳ್ಳಬೇಕಿದೆ ಈ ಹಿನ್ನಲೆಯಲ್ಲಿ ಪಕ್ಷಕ್ಕೆ ಸೇರುವವರ ಸಂಖ್ಯೆ ಅಧಿಕವಾರದಷ್ಟು ನಮಗೆ ಲಾಭವಾಗಲಿದೆ ಎಂದು ತಾಜ್‌ಪೀರ್ ತಿಳಿಸಿ ನ. 9 ರಂದು ಸೇವಾದಳಕ್ಕೆ 100 ವರ್ಷವಾದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಇದಕ್ಕೆ ಚಿತ್ರದುರ್ಗದಿಂದ ಬಹಳಷ್ಟು ಜನತೆ ಭಾಗವಹಿಸಬೇಕಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಗೀತಾ ನಂದಿನಿ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಕುಶಲ ಕರ್ಮಿ ಘಟಕದ ರಾಜ್ಯಾಧ್ಯಕ್ಷರಾದ ಪ್ರಸನ್ನ ಕುಮಾರ್, ಓಬಿಸಿಯ ಎನ್.ಡಿ.ಕುಮಾರ್, ನಜ್ಮತಾಜ್, ಮೀನಾಕ್ಷಿ, ಭಾಗ್ಯಮ್ಮ, ಸುಧಾ, ಖಾಸಿಂಆಲಿ, ಶ್ರೀಮತಿ ಮೋಕ್ಷಾ ರುದ್ರಸ್ವಾಮಿ, ತಿಪ್ಪೇಸ್ವಾಮಿ, ಲೋಕೇಶ್, ಅಲ್ಲಾಭಕ್ಷಿ, ಚೋಟು, ಮುದಸಿರ್ ನವಾಜ್, ಷಬ್ಬೀರ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ : ಈ ರಾಶಿಯವರ ಕುಟುಂಬದಲ್ಲಿ ಒಬ್ಬರಿಂದ ಅಶಾಂತಿಯ ವಾತಾವರಣ: ಸೋಮವಾರ ರಾಶಿ ಭವಿಷ್ಯ -ನವೆಂಬರ್-25,2024 ಸೂರ್ಯೋದಯ: 06:30, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

error: Content is protected !!