ಸುದ್ದಿಒನ್, ಚಿತ್ರದುರ್ಗ, ನವಂಬರ್.01 : ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಟಾಟಾ ಏಸ್ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಇಂದು (ಬುಧವಾರ) ರಾತ್ರಿ 8 : 30 ರ ಸಮಯದಲ್ಲಿ ರಸ್ತೆ ಅಪಘಾತ ಸಂಭವಿಸಿದೆ.
ತಾಲ್ಲೂಕಿನ ಲಕ್ಷ್ಮೀ ಸಾಗರ ಬಳಿ ಉಚ್ಚಂಗಿದುರ್ಗದಿಂದ ಸೊಂಡೆಕೆರೆ ಕಡೆಗೆ ಹೋಗುತ್ತಿದ್ದ ಟಾಟಾ ಏಸ್ ವಾಹನಕ್ಕೆ ಹಿಂಬದಿಯಲ್ಲಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಟಾಟಾ ಏಸ್ ನಲ್ಲಿದ್ದ ಸುಮಾರು ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅವರೆಲ್ಲರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಮಹಿಳೆಗೆ ಮಾತ್ರ ತಲೆಗೆ ಪೆಟ್ಟಾಗಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









