Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇದೆ ರೀತಿ ಮುಂದುವರೆದರೆ ಹೋರಾಟ ಮಾಡ್ತೀವಿ : ಯಡಿಯೂರಪ್ಪ ವಾಗ್ದಾಳಿ

---Advertisement---

ಬೆಂಗಳೂರು: ಬಹಳ ದಿನಗಳ ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಸರ್ಕಾರದ ಮೇಲೆ‌ ವಾಗ್ದಾಳಿ ನಡೆಸಿದ್ದಾರೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಸರ್ಕಾರದ ಮೇಲೆ ಹಿಡಿತವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಯ್ತು. ಚಕ್ರದಲ್ಲಿ ಗಾಳಿ ಇಲ್ಲದೆ ಮುಂದೆ ಹೋಗುತ್ತಿಲ್ಲ. ಅಪಾರ ಭರವಸೆ ನೀಡಿದ ಸರ್ಕಾರ, ಭರವಸೆ ಈಡೇರಿಸಲು ಆಗುತ್ತಿಲ್ಲ. ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದರು ಅವರಿಗೆ ಹಿಡಿತವಿಲ್ಲ. ಆರು ತಿಂಗಳು ಸಮಯ ಕೊಟ್ಟಿದ್ದೇವೆ. ರಾಜ್ಯ ಸರ್ಕಾರ ಸುಧಾರಣೆ ಆಗುತ್ತದೆ ಎಂದು ಕಾದಿದ್ದೇ ಆಯ್ತು. ಆದರೆ ಏನು ಪ್ರಯೋಜನವಾಗಿಲ್ಲ.

 

ಇದೊಂದು ಜನ ವಿರೋಧಿ ಸರ್ಕಾರ. ಇದೆ ರೀತಿ ಮುಂದುವರೆದರೆ ರಾಜ್ಯದ ಉದ್ಧಗಲಕ್ಕೂ ಹೋರಾಟ ಮಾಡಲು ಮುಂದಾಗುತ್ತೇವೆ. ಈ ಹಿಂದೆ ಕೇಂದ್ರ ಅನುದಾನ ಕೊಡುವ ಮೊದಲು ರಾಜ್ಯ ಸರ್ಕಾರ ಹಣ ನೀಡುತ್ತಿತ್ತು. ಆದ್ರೆ ಈಗ ರಾಜ್ಯ ಸರ್ಕಾರ ಎಲ್ಲಾದಕ್ಕೂ ಕೇಂದ್ರದ ಕಡೆ ನೋಡುತ್ತಿದ್ದಾರೆ. ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್‌ ಸುರ್ಜೇವಾಲ ಅವರ ಭೇಟಿ ಚುನಾವಣೆಯ ಟಾರ್ಗೆಟ್ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment