ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ,ನವೆಂಬರ್.02 : ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ 68 ನೆ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಕೆ.ಎಂ.ವೀರೇಶ್ ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣಗೊಂಡು ಐವತ್ತು ವರ್ಷಗಳಾಗಿರುವುದರಿಂದ ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.
ಕನ್ನಡ ನಾಡು, ನುಡಿ, ನೆಲ, ಜಲದ ರಕ್ಷಣೆ ಎಲ್ಲರ ಜವಾಬ್ದಾರಿ. ಹರಿದು ಹಂಚಿ ಹೋಗಿದ್ದ ಕರ್ನಾಟಕದ ಹಲವು ಪ್ರದೇಶಗಳನ್ನು ಒಗ್ಗೂಡಿಸುವಲ್ಲಿ ಅನೇಕ ಹಿರಿಯರ ತ್ಯಾಗ ಬಲಿದಾನಗಳಿದೆ ಎಂದು ಸ್ಮರಿಸಿದರು.
ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಎಂ.ಆರ್.ಜಯಲಕ್ಷ್ಮಿ, ಉಪ ಪ್ರಾಚಾರ್ಯರಾದ ಶಿವಕುಮಾರ್ ಹೆಚ್.ಎಂ. ಕೆ.ಎಂ.ಎಸ್. ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಕೆ.ಮಂಜುಳ, ಕೆ.ಎಂ.ಎ.ಸ್. ಪಿ.ಯು.ಕಾಲೇಜು ಪ್ರಾಚಾರ್ಯರಾದ ಜಿ.ಎನ್.ವೀರಪ್ಪ, ಬಾಪೂಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಾರುತೇಶ್, ಬಾಪೂಜಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಬಿ.ಜಿ.ಪದ್ಮ ಈ ಸಂದರ್ಭದಲ್ಲಿ ಹಾಜರಿದ್ದರು.