ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ,ನವೆಂಬರ್.02 : ಕೇಂದ್ರ ಸರ್ಕಾರದ ಖೇಲೋ ಇಂಡಿಯಾದಿಂದ ಮಕ್ಕಳು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಹಕಾರಿಯಾಗಲಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಸುಚೇತ ನೆಲವಗಿ ಹೇಳಿದರು.
ಸ್ಟೇಡಿಯಂ ರಸ್ತೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಷಟಲ್ ಬ್ಯಾಡ್ಮಿಂಟನ್ ಉಚಿತ ಕೋಚಿಂಗ್‍ನಲ್ಲಿ ಕ್ರೀಡಾಪಟುಗಳಿಗೆ ಉಚಿತ ಸಮವಸ್ತ್ರ, ಪರಿಕರಗಳನ್ನು ವಿತರಿಸಿ ಮಾತನಾಡಿದರು.
ಖೇಲೋ ಇಂಡಿಯಾ ಉದಯೋನ್ಮುಖ ಕ್ರೀಡಾಪಟುಗಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರಲು ನೆರವಾಗಲಿದೆ. ಹಾಗಾಗಿ ಉಚಿತ ಕೋಚಿಂಗನ್ನು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಅಂತರಾಷ್ಟ್ರೀಯ ಕ್ರೀಡಾಪಟು ಎನ್.ಡಿ.ಕುಮಾರ್ ಮಾತನಾಡಿ ಶಿಕ್ಷಣದ ಜೊತೆ ಮಕ್ಕಳು ಆಟಗಳಲ್ಲಿಯೂ ತೊಡಗಬೇಕು. ಆಗ ಮಾತ್ರ ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ಮಕ್ಕಳನ್ನು ಕೇವಲ ಅಂಕ ಗಳಿಕೆಯ ಯಂತ್ರಗಳನ್ನಾಗಿ ಮಾಡುವ ಬದಲು ಬಯಲು ಆಟದಲ್ಲಿ ತೊಡಗಿಕೊಳ್ಳುವಂತೆ ಪೋಷಕರುಗಳು ಉತ್ತೇಜನ ನೀಡಬೇಕು. ಇಂದಿನ ದಿನಗಳಲ್ಲಿ ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತರುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರುಗಳ ಮೇಲಿದೆ ಎಂದು ಹೇಳಿದರು.
ಷಟಲ್ ಬ್ಯಾಡ್ಮಿಂಟನ್ ಕೋಚ್ ಗುರುಮೂರ್ತಿ, ಬೆಸ್ಕಾಂ ಅಧಿಕಾರಿ ನಾಗರಾಜು ಈ ಸಂದರ್ಭದಲ್ಲಿದ್ದರು.