ಚಿತ್ರದುರ್ಗ(ನ.02):ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ ಎಸ್.ಲಾಡ್ ಅವರು ನವೆಂಬರ್ 3ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ನ.3ರಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರಿನಿಂದ ಹೊರಟು, 11.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಮಧ್ಯಾಹ್ನ 12 ರಿಂದ 1.30ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30 ರಿಂದ 4 ರವರೆಗೆ ಮಾಲೀಕ ವರ್ಗದ ಸಂಘಟನೆಗಳ, ಆಡಳಿತ ವರ್ಗದವರ ಸಭೆ ನಡೆಸುವರು. ಸಂಜೆ 4 ರಿಂದ 5 ರವರೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











