Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯನವರು ಐದು ವರ್ಷ ಸಿಎಂ ವಿಚಾರ : ನನ್ನ ಸಮ್ಮತಿ ಇದೆ :  ಕಾರ್ಮಿಕ ಸಚಿವ ಸಂತೋಷ ಲಾಡ್

---Advertisement---

ಸುದ್ದಿಒನ್, ಚಿತ್ರದುರ್ಗ. (ನ. 03):  ರಾಜ್ಯದ ಮುಖ್ಯಮಂತ್ರಿಗಳ ಬದಲಾವಣೆಯ ವಿಚಾರ ಪಕ್ಷದ ಹೈಕಮಾಂಡಿಗೆ ಬಿಟ್ಟದ್ದು, ಇದರಲ್ಲಿ ಯಾವ ಮಂತ್ರಿಯಾಗಲಿ, ಶಾಸಕರಾಗಲಿ ಮಾತು ನಡೆಯುವುದಿಲ್ಲ ಸಿದ್ದರಾಮಯ್ಯರವರು ಐದು ವರ್ಷ ಸಿಎಂ ಆಗಿರುವುದಕ್ಕೆ ನನ್ನ ಸಮ್ಮತಿ ಇದೆ ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭೇಟಿಯಾದ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಈಗಾಗಲೇ ಸಚಿವ ಸಂಪುಟವೂ ಸಹಾ ನಿರ್ಮಾಣವಾಗಿದೆ. ಈಗ ಕೆಲವರು ಮುಂದಿನ ಎರಡುವರೆ ವರ್ಷದಲ್ಲಿ ಸಚಿವ ಸಂಪುಟ ಬದಲಾವಣೆಯಾಗುತ್ತದೆ ಎನ್ನುತ್ತಿದ್ದಾರೆ ಇದರ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಣಯ ಮಾಡಲಿದೆ. ಇಲ್ಲಿ ನಾವು ಹೇಳಿದ ಮಾತ್ರಕ್ಕೆ ಸಚಿವ ಸಂಪುಟ ಬದಲಾವಣೆಯಾಗುವುದಿಲ್ಲ ಶಾಸಕರ, ಹೈಕಮಾಂಡ್‍ನ ತೀರ್ಮಾನ ಮುಖ್ಯವಾಗಿದೆ ಎಂದು ತಿಳಿಸಿದರು.

ಮುಂದಿನ 5 ವರ್ಷಗಳ ನಾನೇ ಸಿಎಂ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ನನ್ನ ಸಹಮತ ಇದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆದ ದಿನದಿಂದ ಎರಡೂವರೆ ವರ್ಷ ಸಿಎಂ ಸ್ಥಾನ ಹಂಚಿಕೆ ಆಗಿದೆಯಾ ಎಂಬ ಪ್ರಶ್ನೆ ಬಹಳಷ್ಟು ಜನರು ಕೇಳುತ್ತಿದ್ದರು ಅದಕ್ಕೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನೇ 5 ವರ್ಷ ಸಿಎಂ ಎಂದು ಹೇಳುವ ಮೂಲಕ ಎಲ್ಲಾ ಚರ್ಚೆ ಹಾಗೂ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಯಾರು ಕೂಡ ಮತ್ತೇ ಮಾತನಾಡಬಾರದು. ಪಕ್ಷದ ಹೈ ಕಮಾಂಡ್ ಹಾಗೂ ಶಾಸಕರು ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಸಚಿವ ಸತೀಶ್ ಜಾರಕೀಹೊಳೆ ಹಾಗೂ ಡಿ ಕೆ ಶಿವಕುಮಾರ್ ಗುಂಪುಗಳನ್ನು ಕಟ್ಟಿಕೊಂಡು ಶಾಸಕರ ಬೆಂಬಲ ಇದೆ. ನಾವು ಕೂಡ ಸಿಎಂ ಆಕಾಂಕ್ಷಿ ಎಂದಿರುವ ಕುರಿತು ನನಗೆ ತಿಳಿದಿಲ್ಲ ಎಂದಷ್ಟೇ ಹೇಳಿದ ಅವರು, ಎಲ್ಲರೂ ಕೂಡ ನಮ್ಮ ಪಕ್ಷದವರೇ ಆಗಿದ್ದು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳು ಇಲ್ಲ. ಅಭಿಪ್ರಾಯಗಳು ಇವೆ ಅಷ್ಟೇ ಎಂದರು.

ಕಾಂಗ್ರೆಸ್ ಪಕ್ಷದ 60 ಜನ ಶಾಸಕರ ಬೆಂಬಲ ನಮಗಿದೆ ಎಂದು ಅಪರೇಷನ್ ಕಮಲ ಮಾಡಲು ಹೊರಟಿರುವ ಬಿಜೆಪಿ ಅವರು ಕುರಿತು ಮಾತನಾಡಿದ ಅವರು, ಬಿಜೆಪಿಯವರಿಗೆ ಇದೀಗ ಮಾಡಲು ಏನು ಕೆಲಸ ಇಲ್ಲ. ಅವರ ಪಕ್ಷ ಅಧಿಕಾರದಲ್ಲಿರದೆ ಬೇರೆ ಪಕ್ಷ ಅಧಿಕಾರದಲ್ಲಿದ್ದಾಗ ಅದನ್ನು ಹೇಗೆ ಬಿಳಿಸಬೇಕು ಎಂಬುವುದನ್ನು ಚಾಳಿಯಾಗಿ ಬೆಳೆಸಿಕೊಂಡಿದ್ದು, ಸಿಬಿಐ ಇಡಿ, ಲೋಕಾಯುಕ್ತ ಎಂದು ತಮ್ಮ ಅಧಿಕಾರವನ್ನು ಬಳಸಿಕೊಂಡು ಮನಬಂದಂತೆ ದಾಳಿ ಮಾಡಿಸಿ, ಆರೋಪಗಳನ್ನು ಮಾಡಿ ಮಾನಸಿಕವಾಗಿ ಕುಗ್ಗಿಸಿ ಬಿಜೆಪಿಗೆ ಕರೆದುಕೊಳ್ಳುವುದು ಅವರ ಹವ್ಯಾಸವಾಗಿದೆ. ಆರೋಪ ಹೊತ್ತ ವ್ಯಕ್ತಿ ಬಿಜೆಪಿಗೆ ಹೋದರೆ ವಾಷಿಂಗ್ ಪೌಡರ್ ನಿರ್ಮಾ ಇದ್ದ ಆಗೆ. ಅಲ್ಲಿ ಎಲ್ಲಾ ತೊಳೆದುಬಿಡುತ್ತಾರೆ ನಂತರ ಆ ವ್ಯಕ್ತಿ ಪರಿಶುದ್ದ ಆಗಿಬಿಡುತ್ತಾನೆ. ಈ ಕೆಲಸವನ್ನು ಬಿಜೆಪಿ ಕಳೆದ 9 ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದು, ಈಗಲೂ ಅದನ್ನೆ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದು ದೂರಿದರು.

ಹೈಕಮಾಂಡ್ ನಾಯಕರು ರಾಜ್ಯಕ್ಕೆ ಬರುವುದೇ ವಸೂಲಿಗೊಸ್ಕರ ಎಂದಿರುವ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಎಲ್ಲರಿಗೂ ತಿಳಿದಿದೆ. ಈ ಮೊದಲು ಬಿಜೆಪಿ ಯವರ ಬಗ್ಗೆ ಮಾತನಾಡುತ್ತಿದ್ದ ಕುಮಾರಣ್ಣ ಇದೀಗ ಕಾಂಗ್ರೇಸ್ ಬಗ್ಗೆ ಮಾತನಾಡುತ್ತಿದ್ದಾರೆ. ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ನಮ್ಮ ಬಗ್ಗೆ ಹೆಚ್ಚಾಗಿ ಮಾತನಾಡುತ್ತಿದ್ದಾರೆ. ಅದನ್ನು ನಿಲ್ಲಿಸಿ ಬರಗಾಲ, ರೈತರು, ಶಿಕ್ಷಣ ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳ ಬಗ್ಗೆ ಮಾತನಾಡಬೇಕು ಎಂದು ಸಲಹೆ ನೀಡಿದರು.

ನಮ್ಮ ಇಲಾಖೆಯಲ್ಲಿ ಕಾರ್ಮಿಕರಿಗೆ ನೀಡಿದ ವಿವಿಧ ರೀತಿಯ ವಸ್ತುಗಳು ಕಳಪೆಯಾಗಿದೆ ಎಂಬ ದೂರು ಇದೆ ಇದರ ಬಗ್ಗೆ ಅಧಿಕಾರಿಗಳ ತಂಡವನ್ನು ರಚನೆ ಮಾಡಲಾಗಿದೆ ಅವರು ವರದಿ ನೀಡಿದ ನಂತರ ಮುಂದಿನ ಕ್ರಮವನ್ನು ತೆಗೆದುಕೊಳ್ಳಲಾಗುವುದು ಅಲ್ಲದೆ ಈ ವಸ್ತುಗಳನ್ನು ಖರೀದಿ ಮಾಡಿದ್ದು ಬಿಜೆಪಿ ಸರ್ಕಾರ ಇದ್ದಾಗ ವಿತರಣೆ ಮಾಡಿದ್ದು ಸಹಾ ಬಿಜೆಪಿ ಸರ್ಕಾರ ಇದ್ದಾಗ ಎಂದು ಸಂತೋಷ ಲಾಡ್ ತಿಳಿಸಿದರು.

ಜಿಲ್ಲಾ ಡಿಸಿಸಿ ಅಧ್ಯಕ್ಷ ತಾಜ್‍ಪೀರ್, ಲಿಡ್ಕರ್ ನಿಗಮದ ಮಾಜಿ ಅಧ್ಯಕ್ಷ ಈ.ಶಂಕರ್, ಜಿ.ಪಂ.ಮಾಜಿ ಸದಸ್ಯ ನರಸಿಂಹರಾಜು, ಕಾಂಗ್ರೆಸ್ ಮುಖಂಡ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ರಾಮನಾಯ್ಕ್, ಖುದ್ದುಸ್, ಲಕ್ಷ್ಮೀಕಾಂತ್, ಶಾಶಕರ ಸಹೋದರ ನಾಗರಾಜ್, ಪರಮೇಶ್, ವಿಜಯಕುಮಾರ್ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...