Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಮಲತಾ ಮತ್ತು ಜೆಡಿಎಸ್ ನಡುವೆ ಟಿಕೆಟ್ ಹಂಚಿಕೆ ಕಿತ್ತಾಟ ನಡೆಯೋದು ಗ್ಯಾರಂಟಿನಾ..? ಮಂಡ್ಯ ಬಗ್ಗೆ ಸಂಸದೆ ಹೇಳಿದ್ದೇನು..?

---Advertisement---

ಮಂಡ್ಯ: ಲೋಕಸಭಾ ಚುನಾವಣೆಗೆ ಈಗಾಗಲೇ ತಯಾರಿ ನಡೆಯುತ್ತಿದೆ. ಕಾಂಗ್ರೆಸ್ ಮಟ್ಟ ಹಾಕಲು ಬಿಜೆಪಿ ಜೊತೆಗೆ ಜೆಡಿಎಸ್ ಕೈಜೋಡಿಸಿದೆ. ಅದರ ಜೊತೆಗೆ ಇಂತಿಷ್ಟು ಕ್ಷೇತ್ರಗಳು ಬೇಕು ಅಂತ ಜೆಡಿಎಸ್ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಅದರಲ್ಲಿ ಮಂಡ್ಯ ಕೂಡ ಒಂದು. ಆದರೆ ಈಗ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧಿಯಾಗಿದ್ದಾರೆ. ಬಿಜೆಪಿ ಸೇರಿರುವ ಸುಮಲತಾಗೆ ಈಗ ಟಿಕೆಟ್ ಸಿಗುತ್ತಾ ಇಲ್ಲವಾ ಎಂಬುದೇ ಚಿಂತೆಯಾಗಿದೆ. ಈ ಬಗ್ಗೆ ಸಂಸದೆ‌ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.

ಎಂಪಿ ಚುನಾವಣೆ ಸಂಬಂಧ ನಾನು ಯಾವುದೇ ಸಿದ್ಧತೆ ಮಾಡಿಕೊಂಡಿಲ್ಲ. ಸರಿಯಾದ ಸಮಯ, ಸಂದರ್ಭ ನೋಡಿ ಎಲ್ಲವೂ ಅಂತಿಮವಾದಾಗ ಹೇಳುತ್ತೇನೆ. ಚುನಾವಣೆ ಬಗ್ಗೆ ಈಗ ನಾನು ಮಾತನಾಡಲ್ಲ ಎಂದಿದ್ದಾರೆ.

 

ಮಂಡ್ಯದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಅಥವಾ ನಿಲ್ಲಲ್ಲ ಎಂಬುದರ ಬಗ್ಗೆ ಈಗಾಗಲೇ ಹಲವು ಬಾರಿ ಮಾತನಾಡಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾದರೂ, ಕ್ಷೇತ್ರಗಳ ಬಗ್ಗೆ ಇನ್ನು ಹಂಚಿಕೆಯಾಗಿಲ್ಲ. ಯಾವುದು ಅಂತಿಮವಾಗದೆ ಮಾತನಾಡುವುದು ಸರಿಯಲ್ಲ. ಮಂಡ್ಯದ ಜನ ನನ್ನ ಜೊತೆಗಿದ್ದಾರೆ. ಅಂಬರೀಶ್ ಅಭಿಮಾನಿಗಳು ಸಹ ನನ್ನ ಜೊತೆಗೆ ಇದ್ದಾರೆ. ನಾನು ಯಾರ ಬಳಿಯೂ ಟಿಕೆಟ್ ಕೇಳಿಲ್ಲ. ಈಗಲೂ ಟಿಕೆಟ್ ಕೇಳಲ್ಲ. ನಾನು ಎಂಪಿ ಸ್ಥಾನ ಇಲ್ಲದೆ‌ ಇರುವಾಗಲೇ ಪಕ್ಷಗಳ ಆಫರ್ ಗಳು ಸ್ವೀಕರಿಸಿಲ್ಲ. ಸದ್ಯ ಎಂಪಿ ಆಗಿದ್ದೀನಿ. ನಾನ್ಯಾಕೆ ಕ್ಷೇತ್ರ ಬಿಟ್ಟುಕೊಡಲಿ ಎಂದೇ ಪ್ರಶ್ನಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...