ಸುದ್ದಿಒನ್, ಚಿತ್ರದುರ್ಗ, ನವಂಬರ್.03 : ಎಸ್ ಕೆ ಬಸವರಾಜನ್ ದಂಪತಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಈ ಪ್ರಕರಣವನ್ನು ರದ್ದು ಮಾಡಿದೆ.
ಎಸ್ ಕೆ ಬಸವರಾಜ್ ಅವರ ಮೊಬೈಲ್ ಆಡಿಯೋ ಆಧರಿಸಿ ಎಫ್ಐಆರ್ ದಾಖಲಾಗಿತ್ತು. ಆ ಪ್ರಕರಣ ರದ್ದು ಕೋರಿ ಬಸವರಾಜನ್ ದಂಪತಿ ಮನವಿ ಸಲ್ಲಿಸಿದ್ದರು. ಈ ಸಂಬಂಧ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿದೆ.
ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಸಂಬಂಧ ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ದೂರು ದಾಖಲಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಆಡಿಯೋಗೆ ಸಂಬಂಧಿಸಿದಂತೆ ಬಸವರಾಜನ್ ಹಾಗೂ ಅವರ ಪತ್ನಿಯನ್ನು ಬಂಧಿಸಲಾಗಿತ್ತು. ಇದೀಗ ಆ ಪ್ರಕರಣ ಸಂಬಂಧ ಅರ್ಜಿ ಸಲ್ಲಿಸಿದ್ದ ಬಸವರಾಜನ್ ಅವರಿಗೆ ಜಯ ಸಿಕ್ಕಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















