Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಡಿಯೂರಪ್ಪನವರೇ ಬೇಕಿದ್ದರೆ ಮೋದಿ ಕಾಲು ಹಿಡಿಯಿರಿ : ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೀಡಿದ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಪ್ರತಿನಿತ್ಯ ಬೈದರೆ ನರೇಂದ್ರ ಮೋದಿ, ಸಿದ್ದುನೇಕೆ ಭೇಟಿಯಾಗ್ತಾರೆ ಎಂದು ಪ್ರಶ್ನೆ ಕೇಳಿದ್ದರು. ಇದೀಗ ಯಡಿಯೂರಪ್ಪ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಯಡಿಯೂರಪ್ಪ ಹೇಳಿಕೆ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದಿದ್ದಾರೆ.

 

ಪ್ರತಿನಿತ್ಯ ಬೈದರೆ @narendramodi ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ @BSYBJP ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ. ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಯಡಿಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ. ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ.

 

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಯಡಿಯೂರಪ್ಪ ಅವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ. ಬಹಳ ಮುಖ್ಯವಾಗಿ ಬಿ.ಎಸ್. ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ. ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾನಿಯವರಂತಹ ಅವರ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಎಸ್ ಯಡಿಯೂರಪ್ಪ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ. ಮೊನ್ನೆಮೊನ್ನೆಯ ವರೆಗೆ ಆರ್.ಎಸ್.ಎಸ್, ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆಗಿರುವ ಹೆಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!