Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

35 ನೇ ಹುಟ್ಟುಹಬ್ಬದಂದು 49 ನೇ ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ : ದಕ್ಷಿಣ ಆಫ್ರಿಕಾಕ್ಕೆ ಬೃಹತ್ ಮೊತ್ತದ ಸವಾಲೊಡ್ಡಿದ ಭಾರತ

---Advertisement---

ಸುದ್ದಿಒನ್ : ODI ವಿಶ್ವಕಪ್ 2023 ರ ಅಂಗವಾಗಿ ಈಡನ್ ಗಾರ್ಡನ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ವೇಳೆ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. 

ದಕ್ಷಿಣ ಆಫ್ರಿಕಾದ ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸಿದ ಅವರು ತಮ್ಮ ODI ವೃತ್ತಿಜೀವನದ 49 ನೇ ಶತಕವನ್ನು ದಾಖಲಿಸಿದರು. ಇದರೊಂದಿಗೆ ಸಚಿನ್ ಏಕದಿನದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಯನ್ನು ಸರಿಗಟ್ಟಿದರು. ಕೊಹ್ಲಿಯ ಅಬ್ಬರದ ಬ್ಯಾಟಿಂಗ್ ನಿಂದಾಗಿ ಭಾರತ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ನೀಡಿದರು. 5 ಓವರ್‌ಗಳಲ್ಲಿ 61 ರನ್ ಸೇರಿಸಿದರು. 24 ಎಸೆತಗಳಲ್ಲಿ 40 ರನ್ ಗಳಿಸಿದ್ದ ರೋಹಿತ್ ಶರ್ಮಾ ಬಿಗ್ ಶಾಟ್ ಆಡುವಾಗ ಕ್ಯಾಚ್ ನೀಡಿದರು. ಈ ಮೂಲಕ ಮೊದಲ ವಿಕೆಟ್‌ಗೆ 62 ರನ್‌ಗಳ ಜೊತೆಯಾಟ ಅಂತ್ಯಗೊಂಡಿತು.

ಬಳಿಕ ಕ್ರೀಸ್ ಗೆ ಬಂದ ಬರ್ತ್ ಡೇ ಬಾಯ್ ವಿರಾಟ್ ಕೊಹ್ಲಿ ತಮ್ಮದೇ ಶೈಲಿಯಲ್ಲಿ ಅಬ್ಬರಿಸಿದರು. ಬ್ಯಾಟಿಂಗ್ ಮಾಡಲು ಕಷ್ಟಕರವಾದ ಪಿಚ್‌ನಲ್ಲಿ ಅವರು ಬ್ಯಾಟ್ ಮಾಡಿದರು. ಗಿಲ್ 23 ರನ್ ಗಳಿಸಿ ಔಟಾದರೂ, ಶ್ರೇಯಸ್ ಅಯ್ಯರ್ ಜೊತೆಗೂಡಿ ಅರ್ಧಶತಕ (77) ಗಳಿಸಿ ಮಿಂಚಿದರು.

ಅವರು ತಮ್ಮ 35 ನೇ ಹುಟ್ಟುಹಬ್ಬದಂದು ಏಕದಿನ ಪಂದ್ಯದಲ್ಲಿ ತಮ್ಮ 49 ನೇ ಶತಕವನ್ನು ದಾಖಲಿಸಿದರು. ಸಚಿನ್ ತೆಂಡೂಲ್ಕರ್ (49) ಏಕದಿನ ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ 452 ಇನ್ನಿಂಗ್ಸ್‌ಗಳಲ್ಲಿ 49 ಶತಕ ಗಳಿಸಿದ್ದರೆ, ಕೊಹ್ಲಿ ಈ ಸಾಧನೆ ಮಾಡಿದ್ದು ಕೇವಲ 277 ಇನ್ನಿಂಗ್ಸ್‌ಗಳಲ್ಲಿ.

ಕೊಹ್ಲಿ ಶತಕದ ನೆರವಿನಿಂದ ಭಾರತ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತು. ದಕ್ಷಿಣ ಆಫ್ರಿಕಾದ ಬೌಲರ್‌ಗಳಾದ ಲುಂಗಿ ಎಂಗಿಡಿ, ಮಾರ್ಕೊ ಜಾನ್ಸನ್, ಕಗಿಸೊ ರಬಾಡ, ಕೇಶವ್ ಮಹಾರಾಜ್ ಮತ್ತು ಶಮ್ಸಿ ವಿಕೆಟ್ ಪಡೆದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment