ಸುದ್ದಿಒನ್, ಚಿತ್ರದುರ್ಗ, (ಅ.28) : ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ನಮ್ ಬೇಕರಿ ಮಾಲೀಕ ಮಂಜುನಾಥ್ ಅವರ
ಬೇಕರಿ ಪರವಾನಗಿ ನವೀಕರಣಕ್ಕಾಗಿ 8 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಬೇಕರಿ ಮಾಲೀಕ ಮಂಜುನಾಥ್ ಎಸಿಬಿಗೆ ದೂರು ನೀಡಿದ್ದರು. ಈ ದೂರಿನನ್ವಯ ಲಂಚ ಸ್ವೀಕರಿಸುವ ವೇಳೆ ಎಸಿಬಿ ಪೊಲೀಸ್ ಇನಸ್ಪೆಕ್ಟರ್ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಎಸಿಬಿ ಅಧಿಕಾರಿಗಳು ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದಾಖಲಾತಿಗಳು, ಲಂಚದ ಹಣ ಜಪ್ತಿ ಮಾಡಲಾಗಿದೆ.