ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ನವಂಬರ್.08 : ಪಜಂತಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ ಯೋಗ ಸಮಿತಿ, ಯುವ ಭಾರತ್, ಪತಂಜಲಿ ಕಿಸಾನ್ ಸೇವಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ-ಯೋಗ ಉತ್ಸವ ಅಂಗವಾಗಿ 25 ದಿನಗಳ ಉಚಿತ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ತರಬೇತಿ ಶಿಬಿರವನ್ನು ಇದೇ ನವೆಂಬರ್ 10 ರಿಂದ ಡಿಸೆಂಬರ್ 4ರವೆರೆಗೆ ಬೆಳಿಗ್ಗೆ 5.30 ರಿಂದ 7 ರವರೆಗೆ ನಗರದ ಹೊಳಲ್ಕೆರೆ ರಸ್ತೆಯ ಶ್ರೀ ಬರಗೇರಮ್ಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನವಂಬರ್ 10ರಂದು ಬೆಳಿಗ್ಗೆ 5.30 ರಿಂದ 7 ರವರೆಗೆ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಹಿಳಾ ಪತಂಜಲಿ ಯೋಗ ಸಮಿತಿ ಮಾಜಿ ಅಧ್ಯಕ್ಷೆ ರೇಣುಕಾ ಉಮೇಶ್ ಉದ್ಘಾಟಿಸುವರು. ಬರಗೇರಮ್ಮ ಮಹಿಳಾ ಪತಂಜಲಿ ಯೋಗ ಸಮಿತಿ ಅಧ್ಯಕ್ಷೆ ಎಸ್.ನಾಗಮ್ಮ ಅಧ್ಯಕ್ಷತೆ ವಹಿಸುವರು.
ಯೋಗ ಶಿಕ್ಷಕರಾದ ಟಿ.ಕೃಷ್ಣಮೂರ್ತಿ, ಎಲ್.ಲತಾ, ರಾಮ್‍ನರೇಶ್, ಎಸ್.ನಾಗಮ್ಮ, ಕೆ.ರಾಮರಾಜ್, ಟಿ.ಕೆ.ಸುಮಲತಾ, ಎಸ್.ಜಯಮ್ಮ ಶಿಬಿರ ನಡೆಸಿಕೊಡುವರು.
ಶಿಬಿರಾರ್ಥಿಗಳು ಯೋಗ ತರಬೇತಿಗೆ ಯೋಗ ಮ್ಯಾಟ್ ಅಥವಾ ಜಮಾಖಾನದೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಟಿ.ಕೃಷ್ಣಮೂರ್ತಿ-8453462044, ಬಿ.ಹೆಚ್.ರೇಣುಕಮ್ಮ-9880280715 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್