Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಶ್ವಕಪ್‌ 2023 | ಸೆಮಿಫೈನಲ್ಸ್‌ ತಲುಪಿದ ನಾಲ್ಕು ತಂಡಗಳು : ವೇಳಾಪಟ್ಟಿ ಮಾಹಿತಿ ಇಲ್ಲಿದೆ …!

---Advertisement---

ಸುದ್ದಿಒನ್ : ವಿಶ್ವಕಪ್-2023 ರಲ್ಲಿ ಸೆಮಿಫೈನಲ್ ಪಂದ್ಯಗಳನ್ನು ಅಂತಿಮಗೊಳಿಸಲಾಗಿದೆ. ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಈ ಮೆಗಾ ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಅರ್ಹತೆ ಪಡೆದಿವೆ. 

ಈ ಮೆಗಾ ಟೂರ್ನಮೆಂಟ್‌ನಿಂದ ಪಾಕಿಸ್ತಾನ ನಿರ್ಗಮಿಸುವುದರೊಂದಿಗೆ, ನ್ಯೂಜಿಲೆಂಡ್ ನಾಲ್ಕನೇ ತಂಡವಾಗಿ ಸೆಮಿಸ್‌ಗೆ ಅರ್ಹತೆ ಪಡೆದಿದೆ.

ನವೆಂಬರ್ 15 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತವನ್ನು ನ್ಯೂಜಿಲೆಂಡ್ ಎದುರಿಸಲಿದೆ.

ನವೆಂಬರ್ 16 ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.

ಕಳೆದ 2019 ರ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟೀಂ ಇಂಡಿಯಾ 18 ರನ್‌ಗಳಿಂದ ಸೋಲು ಕಂಡಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...