Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಮುರುಘಾ ಶರಣರ ಬಿಡುಗಡೆ, ಭಕ್ತರ ಸಂಭ್ರಮ

---Advertisement---

 ಸುದ್ದಿಒನ್, ಚಿತ್ರದುರ್ಗ, ನವೆಂಬರ್.16 : ತೀವ್ರ ಕುತೂಹಲ ಮೂಡಿಸಿದ್ದ ಮುರುಘಾ ಶರಣರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು (ಗುರುವಾರ) ಡಾ.ಶಿವಮೂರ್ತಿ ಮುರುಘಾ ಶರಣರು ಬಿಡುಗಡೆಯಾಗಿದ್ದಾರೆ.

ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ನವಂಬರ್.15 ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.
ಈ ಆದೇಶ ಪ್ರತಿಯನ್ನು ನಿನ್ನೆ ಸಂಜೆ ವೇಳೆಗೆ ಕಾರಾಗೃಹ ತಲುಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇಂದು ಪ್ರತಿಯನ್ನು ತಲುಪಿಸಿದ್ದಾರೆ‌. ಆದೇಶ ಪ್ರತಿಯನ್ನು ಪರಿಶೀಲಿಸಿದ ನಂತರ ಕಾರಾಗೃಹ ಅಧಿಕಾರಿಗಳು ಮುರುಘಾ ಶರಣರನ್ನು ಕಾರಾಗೃಹದಿಂದ ಬಿಡುಗಡೆ ಮಾಡಿದ್ದಾರೆ.

ಮುರುಘಾಶರಣರು ಬಿಡುಗಡೆ ವಿಷಯ ಮೊದಲೇ ತಿಳಿದಿದ್ದರಿಂದ ಕಾರಾಗೃಹ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಹೊರಬಂದ ನಂತರ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಿ ಶ್ರೀಗಳ ಪರ ಘೋಷಣೆ ಕೂಗಿ, ಜೈಕಾರ ಹಾಕಿದರು.

ಹೈಕೋರ್ಟ್ ವಿಧಿಸಿದ ಷರತ್ತಿನನ್ವಯ ಚಿತ್ರದುರ್ಗ ಮುರುಘಾ ಮಠಕ್ಕೆ ಶ್ರೀಗಳು ಪ್ರವೇಶಿಸುವಂತಿಲ್ಲ. ಆದ್ದರಿಂದ ಶ್ರೀಗಳು ದಾವಣಗೆರೆಯ ವಿರಕ್ತಮಠದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...