ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದು ಹಲವರಿಗೆ ಅಸಮಾಧಾನ ತಂದಿದೆ. ಅದರಲ್ಲೂ ವಿ ಸೋಮಣ್ಣ ಕೂಡ ಅಸಮಾಧಾನಗೊಂಡು, ಕಾಂಗ್ರೆಸ್ ಗೆ ಸೇರಲಿದ್ದಾರೆ ಎಂಬ ಮಾತುಗಳು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಆಡಿರುವ ಮಾತುಗಳು ಆಶ್ಚರ್ಯವನ್ನುಂಟು ಮಾಡಿವೆ. ವಿ ಸೋಮಣ್ಣ ಹಾಗೂ ಬಸವರಾಜ್ ಬೊಮ್ಮಾಯಿ ಅವರ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಬಿಜೆಪಿ ನಾಯಕ ವಿ ಸೋಮಣ್ಣ ಅವರಿಗೆ ನನ್ನ ಮೇಲೆ ಪ್ರೀತಿ ಇದೆ. ಸೋಮಣ್ಣ ಹಾಗೂ ಬಸವರಾಜ್ ಬೊಮ್ಮಾಯಿ ನಾವೆಲ್ಲಾ ಒಟ್ಟಿಗೆ ಇದ್ದವರು. ನಮಗೆಲ್ಲ ವೈಯಕ್ತಿಕವಾಗಿ ಪ್ರೀತಿ ಇದೆ. ಆದರೆ ರಾಜಕೀಯವಾಗಿ ಬೇರೆ ಇದ್ದೇವೆ. ಬೊಮ್ಮಾಯಿ ಅವರ ತಂದೆ ರಾಜಕೀಯವಾಗಿ ನನಗೆ ಸಹಾಯ ಮಾಡಿದ್ದಾರೆ. ವಿ ಸೋಮಣ್ಣ ಅವರು ಹೈಕಮಾಂಡ್ ಹೇಳಿತ್ತು ಅಂತ ನನ್ನ ವಿರುದ್ಧ ಸ್ಪರ್ಧೆ ಮಾಡಿದ್ದರು. ಆದರೂ ವಿ ಸೋಮಣ್ಣ ಅವರಿಗೆ ನನ್ನ ಮೇಲೆ ಪ್ರೀತಿ ಇದೆ ಎಂದಿದ್ದಾರೆ.
ಸೋಮಣ್ಣ ಅವರು ವರುಣಾ ಹಾಗೂ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋತಿದ್ದರು. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಲು ಕಂಡಿದ್ದರು. ಈ ನಡುವೆ ವಿ ಸೋಮಣ್ಣ ಅವರು ಮುನಿಸಿಕೊಂಡಿದ್ದು ಬಹಿರಂಗವಾಗಿಯೇ ಇತ್ತು. ಹೈಕಮಾಂಡ್ ಕೂಡ ಸಮಾಧಾನ ಮಾಡುವ ಪ್ರಯತ್ನ ನಡೆಸಿತ್ತು. ಇದೀಗ ಕಾಂಗ್ರೆಸ್ ಸೇರುವ ಎಲ್ಲಾ ಲಕ್ಚಣಗಳು ಕಾಣಿಸುತ್ತಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








