ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ನವೆಂಬರ್.18 : ಇಡೀ ಪ್ರಪಂಚವೇ ತೀವ್ರ ಕಾತುರದಿಂದ ಎದುರು ನೋಡುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ವಿಶ್ವಕಪ್ 2023 ರ ಕ್ರಿಕೆಟ್ ಫೈನಲ್ ಪಂದ್ಯಾವಳಿ ನಾಳೆ (ನವೆಂಬರ್ 19) ನಡೆಯಲಿದೆ. ಈ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪ್ರಸಾರ ಮಾಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ನಾಳೆ (19-11-2023) ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ, ಸಾರ್ವಜನಿಕರಿಗೆ/ ಕ್ರೀಡಾಪಟುಗಳಿಗೆ ದೊಡ್ಡ ಪರದೆಯಲ್ಲಿ ಅನುಕೂಲವಾಗುವಂತೆ ವೀಕ್ಷಿಸಲು ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದೆ.
ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸುವಂತೆ ಕ್ರಮ ಕೈಗೊಳ್ಳಲಾಗಿದ್ದು, ಕ್ರೀಡಾಂಗಣದಲ್ಲಿ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸಜ್ಜಾಗಿದೆ.
ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸುವಂತೆ ಪ್ರಕಟಣೆಯಲ್ಲಿ ಸೂಚಿಸಿದೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್