ಸುದ್ದಿಒನ್, ಚಿತ್ರದುರ್ಗ, ನವೆಂಬರ್.20 : ಕಳೆದ ನವೆಂಬರ್ 16 ರಂದು ಬಿಡುಗಡೆಯಾಗಿದ್ದ ಮುರುಘಾಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ ಎರಡನೇ ಪ್ರಕರಣ ಇದೀಗ ಕಂಟಕವಾಗಿದೆ.
ಎರಡನೇ ಪೋಕ್ಸೋ ಪ್ರಕರಣದಲ್ಲಿ ಶ್ರೀಗಳ ವಿರುದ್ಧ ಹೊರಡಿಸಿದ ಬಾಡಿ ವಾರೆಂಟ್ ನ್ನು ನ್ಯಾಯಾಂಗ ಬಂಧನವಾಗಿ ಪರಿವರ್ತನೆ ಮಾಡಬೇಕು ಎಂಬ ಸರ್ಕಾರಿ ವಕೀಲರ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನ.16 ಕ್ಕೆ ಮುಂದೂಡಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಇಂದು ಅರೆಸ್ಟ್ ವಾರಂಟ್ ಜಾರಿ ಮಾಡಿದೆ.