Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಲಿಟ್ಲ್ ರೋಜಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ: ನಗರದ ವಿ.ಪಿ ಬಡಾವಣೆಯ ಜಿಲ್ಲಾ ತೋಟಗಾರಿಕೆ ಇಲಾಖೆ ಸಮೀಪದ ಮಾತೃಶ್ರೀ ಎಜುಕೇಷನ್ ಸೊಸೈಟಿಯ ಲಿಟ್ಲ್ ರೋಜಸ್ ಶಾಲೆಯಲ್ಲಿ ಈಚಗೆ ರಾಷ್ಟ್ರೀಯ ಶಿಕ್ಷಣ ದಿನ ಹಾಗೂ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಚಿತ್ರದುರ್ಗ ನಗರದ ಉತ್ತರ ಕ್ಲಸ್ಟರ್ ಸಿಆರ್‍ಪಿ ರವಿಶಂಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಶಿಕ್ಷಣದ ಗುರಿ ಮತ್ತು ಉದ್ದೇಶಗಳನ್ನು ಮಕ್ಕಳಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶಾಲಾ ಹಂತದಲ್ಲಿ ನಡೆಸಿದ ವಿವಿಧ ಕಾರ್ಯಕ್ರಮಗಳಿಗೆ ಅನುಸಾರವಾಗಿ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತೃಶ್ರೀ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ನಾಗಮಣಿ, ಮುಖ್ಯ ಶಿಕ್ಷಕಿ ಕೌಸರ್‍ಭಾನು, ಸಹ ಶಿಕ್ಷಕರಾದ ರೇಷ್ಮಾಭಾನು, ಅನುಷಾ, ಸಿಂಧು, ಎಂ.ಜೆ.ಜಯಲಕ್ಷ್ಮಿ ಸೇರಿದಂತೆ ಮಕ್ಕಳು, ಪೋಷಕರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment