Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಖಚಿತ : ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ ಶಾಸಕರ ಹೇಳಿಕೆ

---Advertisement---

ಬೆಳಗಾವಿ: ಕಾಂಗ್ರೆಸ್ ನಲ್ಲಿ ಸದ್ಯ ಸಿಎಂ ವಿಚಾರಚೇ ಸಾಕಷ್ಟು ಸಂಚಲನ ಸೃಷ್ಟಿಸುವಂತ ವಿಚಾರವೇ ಆಗಿದೆ. ಇದೀಗ ಸತೀಶ್ ಜಾರಕಿಹೊಳಿ ಸಿಎಂ ಆಗುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸತೀಶ್ ಜಾರಕಿಹೊಳಿ ಸಿಎಂ ಆಗುತ್ತಾರೆ ಎಂಬುದನ್ನು ಶಾಸಕ ವಿಶ್ವಾಸ್ ವೈದ್ಯ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಸತೀಶ್ ಜಾರಕಿಹೊಳಿ ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ. ಅವರು ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ. ಮುಂದಿನ ದಿನಗಳಲ್ಲಿ ಬೆಳಗಾವಿ ಗಡಿ ಭಾಗದಿಂದ ಒಬ್ಬರು ಸಿಎಂ ಆಗುತ್ತಾರೆ. ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಸತೀಶ್ ಅಣ್ಣ ಸಿಎಂ ಆಗುವುದು ಅಷ್ಟೇ ಸತ್ಯ ಎಂದು ಸತೀಶ್ ಜಾರಕಿಹೊಳಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವಿಶ್ವಾಸ್ ವೈದ್ಯ ತಿಳಿಸಿದ್ದಾರೆ.

 

ಸಿಎಂ ಹೇಳಿಕೆ ವಿಚಾರ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇನೋ ಸೃಷ್ಟಿಸಿದೆ. ಮೊದಲೇ ಸತೀಶ್ ಜಾರಕಿಹೊಳಿ ಅವರಲ್ಲಿ ಅಸಮಾಧಾನದ ಹೊಗೆಯಾಡುತ್ತಿತ್ತು. ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಸಮಾಧಾನ ಮಾಡಿದ್ದಾರೆ. ಸಿಎಂ ಆಗುವ ಆಸೆ ಇದೆ. ಆದರೆ ಇದು ಸೂಕ್ತ ಸಮಯ ಅಲ್ಲ, ಈಗ ಸಿಎಂ ಹುದ್ದೆ ಖಾಲಿ ಇಲ್ಲ ಎಂದೇ ಸತೀಶ್ ಜಾರಕಿಹೊಳಿ ಕೂಡ ಹೇಳಿದ್ದರು. ಈ ಬೆನ್ನಲ್ಲೇ ಇಂಥದ್ದೊಂದು ಹೇಳಿಕೆ ಎಲ್ಲೆಡೆ ಗಮನ ಸೆಳೆಯುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment