ಬೆಂಗಳೂರು: ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ‘ನನಗೂ ಸಂಸತ್ ಹೋಗಬೇಕೆಂಬ ಬಯಕೆ ಇದೆ’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವು ಸಚಿವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಆಸೆ ಹೊಂದಿದ್ದಾರೆ. ನನಗೂ ಕೂಡ ಸಂಸತ್ ಗೆ ಹೋಗಬೇಕೆಂಬ ಆಸೆ ಇದೆ. 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ಕಾಂಗ್ರೆಸ್ ಜನರ ಬಗ್ಗೆಯೇ ಯೋಚಿಸುತ್ತಿದೆ ಎಂದಿದ್ದಾರೆ.
ಇನ್ನು ಇದೇ ವೇಳೆ ತಮ್ಮ ಗ್ಯಾರಂಟಿಗಳ ಬಗ್ಗೆ ಮಾತನಾಡಿದ್ದು, ಬಿಜೆಪಿಗರು ಇಷ್ಟು ದಿನ ನಮ್ಮ ಗ್ಯಾರಂಟಿಗಳ ಬಗ್ಗೆಯೇ ಮಾತನಾಡುತ್ತಿದ್ದರು. ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡುತ್ತಿದ್ದಾರೆ ಎಂದಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಈಗ ಲೋಕಸಭಾ ಚುನಾವಣೆಯತ್ತ ಗಮನ ಹರಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಜೊತೆಗೆ ಜೆಡಿಎಸ್ ಕೈ ಜೋಡಿಸಿದೆ. ಅತ್ತ ದೇಶದಲ್ಲಿ ಬಿಜೆಪಿ ಸೋಲಿಸುವುದಕ್ಕೆ ವಿಪಕ್ಷಗಳು ಒಂದಾಗಿ, ಇಂಡಿಯಾ ಪಕ್ಷ ಕಟ್ಟಿವೆ. ಹೀಗಾಗಿ ಈ ಬಾರಿಯ ಲೀಕಸಭಾ ಚುಬಾವಣೆ ಹೈವೋಲ್ಟೇಜ್ ಕಣವಾಗುವುದರಲ್ಲಿ ಅನುಮಾನವಿಲ್ಲ