ಬಿಜೆಪಿಗೆ ಹಳೇ ಮೈಸೂರು ಭಾಗದ ಗೆಲುವು ಬಹಳ ಮುಖ್ಯ. ಅದಕ್ಕಾಗಿ ಸಾಕಷ್ಟು ಪ್ರಯತ್ನ ಕೂಡ ಮಾಡಲಿದೆ. ಇದೀಗ ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ವಿಜಯೇಂದ್ರ ಅವರ ಮೇಲೆ ಸಾಕಷ್ಟು ದೊಡ್ಡ ಜವಬ್ದಾರಿ ಈಗ ಇದೆ. ಲೋಕಸಭಾ ಚುನಾವಣೆ ಬೇರೆ ಸನಿಹದಲ್ಲಿಯೇ ಇದೆ. ಹೀಗಾಗಿಯೇ ಪಕ್ಷ ಸಂಘಟನೆಯಲ್ಲಿ ಬಿವೈ ವಿಜಯೇಂದ್ರ ಅವರು ಬ್ಯುಸಿಯಾಗಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಕಮಲ ಅರಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ನಾಯಕರು, ಚುನಾವಣೆಗೂ ಮುನ್ನ ಆಕ್ಟೀವ್ ಆಗಿದ್ದಾರೆ. ಯಾಕಂದ್ರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿಯೇ ಹೀನಾಯವಾಗಿ ಸೋಲು ಕಂಡಿತ್ತು ಬಿಜೆಪಿ. ಮಂಡ್ಯ ಭಾಗದಲ್ಲಿ ಬೂತ್ ಮಟ್ಟದಿಂದಾನೇ ಪಕ್ಷ ಸಂಘಟನೆಗೆ ಬಿವೈ ವಿಜಯೇಂದ್ರ ಮುಂದಾಗಿದ್ದಾರೆ.
ಎರಡು ದಿನಗಳ ಕಾಲ ಮೈಸೂರು ಭಾಗದಲ್ಲಿ ಪ್ರಚಾರ ಕಾರ್ಯ ಮುಗಿಸಿದ್ದಾರೆ. ಬಳಿಕ ಮಂಡ್ಯದಲ್ಲಿ ಸಭೆ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ಗರಂ ಆಗಿದ್ದಾರೆ. ಮೊದಲ ಬಾರಿಗೆ ಕೆ ಆರ್ ಪೇಟೆಯಲ್ಲಿ ವಿಜಯ ಪತಾಕೆ ಹಾರಿತ್ತು. ಆದರೆ ಈ ಬಾರಿ ಚುನಾವಣೆಯಲ್ಲಿ ಹಿನ್ನೆಡೆಯಾಗಿದೆ. ಈಗಾಗಲೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಹೋರಾಟ ಮಾಡುತ್ತೇವೆ. ಬಿಜೆಪಿ ಕಾರ್ಯಕರ್ತರಿಗೆ ಶಕ್ತಿ ಕೊಡುತ್ತೇನೆ ಎಂದು ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.