Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು : ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್

---Advertisement---

ಸುದ್ದಿಒನ್, ಚಿತ್ರದುರ್ಗ. ನ.23: ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂಬ ಆಚಲ ನಿರ್ಧಾರ, ಆತ್ಮವಿಶ್ವಾಸ, ಸಮಸ್ಯೆಗಳನ್ನು ಮೆಟ್ಟಿನಿಲ್ಲುವ ಆತ್ಮಸ್ಥೈರ್ಯ ಇದ್ದಲ್ಲಿ ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.

ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ  ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಕಲಚೇತನರಾಗಿದ್ದರೂ ಸಹ ಬಹಳಷ್ಟು ಮಂದಿ ಐಎಎಸ್ ಪರೀಕ್ಷೆಯನ್ನೂ ಪಾಸ್ ಮಾಡಿದ್ದಾರೆ. ಪ್ಯಾರಾ ಒಲಂಪಿಕ್ ಕ್ರೀಡಾಕೂಟದಲ್ಲೂ ಉತ್ತಮ ಸಾಧನೆ ತೋರಿದ್ದಾರೆ. ಹಾಗಾಗಿ ಸಾಧನೆ ಮಾಡಬೇಕು ಎಂದು ಛಲ ಹೊಂದಿದ್ದರೆ ಅಂಗವೈಕಲ್ಯತೆ ಸಾಧನೆಗೆ ಅಡ್ಡಿಯಾಗಲಾರದು ಎಂದು ಹೇಳಿದರು.

ವಿಶ್ವ ವಿಕಲಚೇತನರ  ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಕಲಚೇತರು ತುಂಬಾ ಉತ್ಸಾಹ ಹಾಗೂ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ವಿಜಯ್ ಕುಮಾರ್ ಮಾತನಾಡಿ, ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಕಲಚೇತನರು ಸಂತೋಷ ಹಾಗೂ ಉತ್ಸಾಹದಿಂದ ಭಾಗವಹಿಸಬೇಕು. ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಹೇಳಿದರು.

ಗಮನ ಸೆಳೆದ ವಿಕಲಚೇತನರ ಕ್ರೀಡಾಕೂಟ: ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಗಮನಸೆಳೆದವು.
18 ರಿಂದ 45 ವರ್ಷ ವಯೋಮಿತಿಯ ಅಂಧರಿಗೆ ಮಡಿಕೆ ಹೊಡೆಯುವುದು, ಕೇನ್ ರೇಸ್ ಸ್ಪರ್ಧೆ, ಶ್ರವಣ ದೋಷವುಳ್ಳವರಿಗೆ 100ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ ಸ್ಪರ್ಧೆ, ದೈಹಿಕ ವಿಕಲಚೇತನರಿಗೆ 100 ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ. ಬುದ್ಧಿಮಾಂದ್ಯರಿಗೆ 100ಮೀ. ಓಟ,  ಬಕೆಟ್‍ನಲ್ಲಿ ರಿಂಗ್ ಎಸೆತ, ಮ್ಯೂಜಿಕಲ್ ಚೇರ್ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಎಲ್ಲ ಸ್ಪರ್ಧೆಗಳಲ್ಲಿ ವಿಕಲಚೇತನರು ಭಾಗವಹಿಸಿ ಗೆಲುವಿಗಾಗಿ ಸೆಣೆಸಾಡಿದರು.

18 ರಿಂದ 45 ವರ್ಷ ವಯೋಮಿತಿಯೊಳಗಿನ ದೃಷ್ಟಿದೋಷ ಮತ್ತು ದೈಹಿಕ ವಿಕಲಚೇತನರು ಮತ್ತು ಬುದ್ದಿಮಾಂದ್ಯವಿರುವವರಿಗೆ ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ ಸ್ಪರ್ಧೆಗಳು ನಡೆದವು.

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎ.ಎಂ.ವೀಣಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರ, ಶಾಲಾ ಶಿಕ್ಷಣ ಇಲಾಖೆಯ ಚಿದಾನಂದ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಜಯಣ್ಣ ಸೇರಿದಂತೆ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಕಾರ್ಯಕರ್ತರು ಹಾಗೂ ವಿಕಲಚೇತನರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment