ಹಾಸನ : ತಹಶಿಲ್ದಾರ್ ಬಂಧನಕ್ಕೆ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಈಗಾಗಲೇ ತಹಶಿಲ್ದಾರ್ ಬಂಧನಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಕೋರ್ಟ್ ನೀಡಿರುವ ಆದೇಶದಂತೆ ಇಂದು ತಹಶಿಲ್ದಾರ್ ಶ್ವೇತಾ ಅರೆಸ್ಟ್ ಆಗುವ ಸಾಧ್ಯತೆ ಇದೆ.
ತಹಶಿಲ್ದಾರ್ ಶ್ವೇತಾ ಅವರು ಸಾಕ್ಷ್ಯಾ ಹೇಳುವ ವಿಚಾರದಲ್ಲಿ ಗೈರಾದ ಕಾರಣ ಬಂಧನದ ಆದೇಶವನ್ನು ಹೊರಡಿಸಲಾಗಿದೆ. ಇದರ ಜೊತೆಗೆ ಸಮನ್ಸ್ ಕೂಡ ಪಡೆಯದ ಹಿನ್ನೆಲೆ ಸಿವಿಲ್ ಕೋರ್ಟ್ ಬಂಧನಕ್ಕೆ ಆದೇಶ ಹೊರಡಿಸಿದೆ. ಬಂಧಿಸಿದ ಬಳಿಕ ಕೋರ್ಟ್ ಮುಂದೆ ಹಾಜರುಪಡಿಸಲು ಸೂಚನೆ ನೀಡಲಾಗಿದೆ.
ಇನ್ನು ಕೋರ್ಟ್ ಆದೇಶದ ಮೇರೆಗೆ ಈಗಾಗಲೇ ವಕೀಲರು ತಹಶಿಲ್ದಾರ್ ಕಚೇರಿಗೆ ಹೋಗಿದ್ದರು. ಆದರೆ ತಹಶಿಲ್ದಾರ್ ಕಚೇರಿಯಲ್ಲಿ ಇರಲಿಲ್ಲ. ಕೋರ್ಟ್ ಆದೇಶ ತಿಳಿದಿದ್ದರು, ಕಚೇರಿಯಲ್ಲಿಯಿರದೆ ಇದ್ದ ಕಾರಣ, ವಕೀಲರು ಗರಂ ಆಗಿದ್ದಾರೆ. ಕಚೇರಿಯಲ್ಲಿದ್ದವರನ್ನು ತರಾಟೆಗೆ ತೆಗೆದುಕೊಂಡು ಬಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















