Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಸತ್ಯ ಹರಿಶ್ಚಂದ್ರ ಎಂದು ಸಾಬೀತುಪಡಿಸಲು ಅವಕಾಶವಿದೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

---Advertisement---

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರ ಸಂಪೂರ್ಣ ಕಾನೂನುಬಾಹಿರವಾಗಿದೆ ಎಂದು ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಶಿವಕುಮಾರ್ ಅವರು ಸತ್ಯ ಹರಿಶ್ಚಂದ್ರ ಎಂದು ಸಾಬೀತು ಪಡಿಸಲು ಇನ್ನು ಅವಕಾಶವಿದೆ ಎಂದು ತಿಳಿಸಿದ್ದಾರೆ.

 

ಈ ಬಗ್ಗೆ ಮಾತನಾಡಿದ ವಿಜಯೇಂದ್ರ ಅವರು, ಜನತೆಯ ಮುಂದೆ‌ ನೀವೂ ತಪ್ಪು ಮಾಡಿಲ್ಲ ಎಂದು ತನಿಖೆ ಎದುರಿಸಿ ಸಾಬೀತುಪಡಿಸಿ ತೋರಿಸಿ. ಆದಾಯ ತೆರಿಗೆ ದಾಳಿಯಾದಾಗ ಬೆಂಗಳೂರು ಮತ್ತು ವಿವಿದೆಡೆ ಲಭಿಸಿದ ಹಣದ ವಿಷಯ ಎಲ್ಲರಿಗೂ ಗೊತ್ತು. ಇಡಿ ಕೂಡ ಹಲವು ವರ್ಷಗಳ ತನಿಖೆ ನಡೆಸಿದೆ. ಕ್ಯಾಬಿನೆಟ್ ನಿರ್ಧಾರ ಸಂಪೂರ್ಣವಾಗಿ ತಪ್ಪು ನಿರ್ಧಾರವಾಗಿದೆ ಎಂದಿದ್ದಾರೆ.

 

ಕಾಂಗ್ರೆಸ್ ಪಕ್ಷದ ನಿರ್ಧಾರ ದುರದೃಷ್ಟಕರ ಹಾಗೂ ಬಿಜೆಪಿ ಈ ನಿರ್ಧಾರವನ್ನು ಖಂಡಿಸುತ್ತದೆ. ಇದು ಕಾನೂನಿನ ವಿರುದ್ಧ ತೆಗೆದುಕೊಂಡಿರುವ ನಿರ್ಧಾರವಾಗಿದೆ. ಡಿಕೆ ಶಿವಕುಮಾರ್ ಯಾಕಾಗಿ ತನಿಖೆಗೆ ಭಯ ಪಡುತ್ತಾರೆ..? ಅವರಿಗೆ ಕಾನೂನಿನ ಮೇಲೆ ವಿಶ್ವಾಸ ಇಲ್ಲವೆ..? ತಾವು ಹಲವು ವರ್ಷಗಳಿಂದ ನಿರಂತರವಾಗಿ ಕಾನೂನು ಹೋರಾಟ ಮಾಡುತ್ತ ಬರುತ್ತಿದ್ದೀರಿ. ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಜವಾಬ್ದಾರಿಯ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿ ಇದ್ದರೆ ಕ್ಯಾಬಿನೆಟ್ ಕೈಗೊಳ್ಳುವ ಈ ತೀರ್ಮಾವನ್ನು ವಿರೋಧಿಸಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment