ರಕ್ತದಾನ ಮಾಡಿ, ಸಾವು-ಬದುಕಿನ ನಡುವೆ ಹೋರಾಡುತ್ತಿರುವವರ ಜೀವ ಉಳಿಸಿ : ರಾಜೇಶ್ ಮದಕರಿ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.24 :  ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ರಾಜೇಶ್ ಮದರಿ ಹುಟ್ಟುಹಬ್ಬದ ಪ್ರಯುಕ್ತ ನಗರದ ಸ್ಟೇಡಿಯಂ ರಸ್ತೆಯಲ್ಲಿರುವ ಬುದ್ದನ ಪ್ರತಿಮೆ ಬಳಿ ಶುಕ್ರವಾರ ಬೃಹತ್ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ರಾಜೇಶ್ ಮದಕರಿ ಮಾತನಾಡಿ ಜನ್ಮದಿನವನ್ನು ಸಹಜವಾಗಿ ಎಲ್ಲರೂ ಅದ್ದೂರಿಯಾಗಿ ಆಚರಿಸಿಕೊಳ್ಳುವುದುಂಟು. ಆದರೆ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವುದರಿಂದ ಮನಸ್ಸಿಗೆ ಖುಷಿಯಾಗಿದೆ. ಅಪಘಾತ, ಹೆರಿಗೆ, ಆಪರೇಷನ್ ಇನ್ನು ಅನೇಕ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಜಾಸ್ತಿಯಿರುತ್ತದೆ. ಇದರಿಂದ ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿರುವವರ ಅಮೂಲ್ಯವಾದ ಜೀವ ಉಳಿಸಿದಂತಾಗುತ್ತದೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ರಾಜೇಶ್ ಮದರಿ ಅಭಿಮಾನಿಗಳ ಬಳಗದ ದಿಲೀಪ್ ಸಿ. ರಾಕೇಶ್, ಪವನ್‍ಕುಮಾರ್, ಅಭಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

21 ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ಆಯುಷ್ಮಾನ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಚಿತ ಆರೋಗ್ಯ ತಪಾಸಣೆ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks