Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ಯಾರಂಟಿ ಯೋಜನೆ ಬಗ್ಗೆ ಪ್ರಧಾನಿ ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು : ಶತಕೋಟಿ ಸಂಭ್ರಮದಲ್ಲಿ ಸಿಎಂ ಸಿದ್ದರಾಮಯ್ಯ

---Advertisement---

ಶಕ್ತಿ ಯೋಜನೆಯ ಶತಕೋಟಿ ಸಂಭ್ರಮದ ಉದ್ಘಾಟನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದಿದ್ದಾರೆ.

 

ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ನಾವು ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ. ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಸರ್ಕಾರದ ಸಾಧನೆಗಳ ದಾಖಲೆ ಕಣ್ಣ ಮುಂದಿದೆ. ವಿರೋಧ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು.
ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಎಲ್ಲಾ ದಾಖಲೆಗಳು ಕಣ್ಣ ಮುಂದಿವೆ. ಆದರೂ ವಿರೋಧ ಪಕ್ಷಗಳು ಸುಳ್ಳು ಹೇಳುತ್ತವೆ.

 

ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. 1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ.
ಜೊತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಕೆಲವರಿಗೆ ಹೊಟ್ಟೆಯುರಿ.

 

ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ. ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment