Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಪತ್ರಕರ್ತ ಸುರೇಶ್ ಬೆಳಗೆರೆಯವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ಪ್ರಶಸ್ತಿ

---Advertisement---

ಸುದ್ದಿಒನ್, ಚಿತ್ರದುರ್ಗ : ನವೆಂಬರ್.27 :ಪತ್ರಿಕಾ ರಂಗದ ಸೇವೆಯನ್ನು ಗುರುತಿಸಿ ಪತ್ರಕರ್ತ ಸುರೇಶ್ ಬೆಳಗೆರೆಯವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ರಾಜ್ಯ ಗೌರವ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಗ್ರಾಮೀಣ ಯುವ ಕನ್ನಡ ಸಾಹಿತ್ಯ ಕ್ರಿಯಾ ಸಮಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಇವರ ವತಿಯಿಂದ ಹೂವಿನ ಹಡಗಲಿ ಸುಕ್ಷೇತ್ರ ಮೈಲಾರ ದಲ್ಲಿ ನಡೆಯಲಿರುವ ಕರ್ನಾಟಕ ಸಂಭ್ರಮ ಕರ್ನಾಟಕ ಗ್ರಾಮೀಣ ಕನ್ನಡ ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಯನ್ನು ಗುರುತಿಸಿ ಪತ್ರಕರ್ತ ಸುರೇಶಬೆಳಗೆರೆ ಇವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ರಾಜ್ಯ ಗೌರವ ಪ್ರಶಸ್ತಿ ಲಭಿಸಿದೆ. ಇಂದು ಸುಕೇತ್ರ ಮೈಲಾರದಲ್ಲಿ   ನಡೆಯಲಿರುವ  ಕನ್ನಡ   ಸಂಭ್ರಮ ಕಾರ್ಯಕ್ರಮ ದಲ್ಲಿ  ಸನ್ಮಾನಿಸಿ ಗೌರವಿಸಲಿದೆ.

ಸುರೇಶ ಬೆಳಗೆರೆ ಅವರ ಬಗ್ಗೆ ಕಿರು ಪರಿಚಯ :
ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದವರಾಗಿದ್ದು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಬೆಳಗೆರೆ ಡಿ ಸೀತಾರಾಮ ಶಾಸ್ತ್ರಿ ಸಂಯುಕ್ತ ಪದವಿಪೂರ್ವ ವಿದ್ಯಾಭ್ಯಾಸ ಮುಗಿಸಿ 19.12.2006 ರಲ್ಲಿ ಖಾಸಗಿ  ಚಾನಲ್  ನಲ್ಲಿ ಸೇವೆ ಆರಂಭಿಸಿ ಅಲ್ಲಿಂದ ಇಲ್ಲಿಯವರೆ ನಿರಂತರವಾಗಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಇವರ ಸೇವೆಯನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಚಳ್ಳಕೆರೆ ಪತ್ರಿಕೋದ್ಯಮ ಸಾಧಕರ ಪ್ರಶಸ್ತಿ, ಕೊರೋನಾ ವಾರಿಯರ್ಸ್‌ ಜಿಲ್ಲಾ ಪ್ರಶಸ್ತಿ, ಹಾಗೂ ಇತ್ತಿಚೆಗೆ ಗೋವಾದ ವಾಸ್ಕೋದಲ್ಲಿ ರವೀಂದ್ರ ಕಲಾ ಭವನ ದಲ್ಲಿ ರಾಷ್ಟ್ರೀಯ ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನ್ಯಾಷನಲ್ ಗ್ಲೋಬಲ್ ಐಕಾನ್ ಅವಾರ್ಡ್ ಸೇರಿದಂತೆ ವಿವಿಧ ಪ್ರಶಸ್ತಿಗಳು ಲಭಿಸಿವೆ.

ಇಂದು ಸುಕೇತ್ರ ಮೈಲಾರದಲ್ಲಿ ನಡೆಯುತ್ತಿರುವ ಕನ್ನಡ ನುಡಿ ಹಬ್ಬದಲ್ಲಿ  ಮೈಲಾರ ಬಸವಲಿಂಗ ಶರಣಶ್ರೀ ರಾಜ್ಯ ಗೌರವ ಪ್ರಶಸ್ತಿ ಲಭಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...