ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಾ ಇದೆ. ಹೀಗಾಗಿ ಸ್ಯಾಂಡಲ್ ವುಡ್ ನಟ – ನಟಿಯರೆಲ್ಲಾ ಭೇಟಿ ನೀಡಿ, ಆರೋಗ್ಯ ವಿಚಾರಿಸಿಕೊಂಡು ಬರುತ್ತಿದ್ದಾರೆ. ಮೊನ್ನೆಯೆಲ್ಲಾ ದರ್ಶನ್, ಅರ್ಜುನ್ ಸರ್ಜಾ ಭೇಟಿ ನೀಡಿದ್ದರು. ಇಂದು ಹ್ಯಾಟ್ರಿಕ್ ಹೀರೋ ಶಿವ ರಾಜ್‍ಕುಮಾರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.
ಹಿರಿಯ ನಟಿ ಲೀಲಾವತಿ ಅವರು ತಮ್ಮ ಮಗನ ಜೊತೆಗೆ ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯಲ್ಲಿ ವಾಸವಾಗಿದ್ದಾರೆ. ಅಲ್ಲಿನ ಜನರಿಗೆ ಅನುಕೂಲವಾಗುವಂತೆ ಆಸ್ಪತ್ರೆಗಳನ್ನು ಕಟ್ಟಿಸಿ, ಸಮಾಜಸೇವೆ ಮಾಡುತ್ತಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದು, ಇಂದು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಭೇಟಿ, ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ವೇಳೆ ಮಾತನಾಡಿದ ನಟ ಶಿವರಾಜ್ ಕುಮಾರ್, ನನ್ನ ವಾಯ್ಸ್ ಕೇಳಿ ಕಂಡು ಹಿಡಿದರು. ಈ ವಯಸ್ಸಿನಲ್ಲಿ ತಾಳುವಂತ ಶಕ್ತಿ ಅವರಲ್ಲಿ ಇದೆ. ಯೋಗ ಪುರುಷರು ಅವರು. ಒಳ್ಳೆಯ ಮನಸ್ಸು, ಒಳ್ಳೆಯ ಆತ್ಮೀಯತೆ, ಪ್ರೀತಿ, ಆಶೀರ್ವಾದವಿದೆ. ಲೀಲಾವತಿ ಅವರನ್ನು ನೋಡಿದರೆ ನನ್ನ ತಾಯಿ ನೋಡೊದಂತೆಯೇ ಆಗುತ್ತದೆ. ಅವರು ಇನ್ನು ಇರಬೇಕು. ನೋವಾಗುತ್ತದೆ, ಆದರೆ ತಡೆದುಕೊಳ್ಳಬೇಕು ಎಂದು ವಿನೋದ್ ರಾಜ್ ಅವರಿಗೆ ಧೈರ್ಯ ತುಂಬಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್