Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುನೀತ್‍ರಾಜ್‍ಕುಮಾರ್ ವಿಧಿವಶ : ಕೋಟ್ಯಾಂತರ ಅಭಿಮಾನಿಗಳ ಮನಸ್ಸಿಗೆ ನೋವುಂಟಾಗಿದೆ :   ಡಾ.ಶಿವಮೂರ್ತಿ ಮುರುಘಾ ಶರಣರು

Facebook
Twitter
Telegram
WhatsApp

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್

ಸುದ್ದಿಒನ್, ಚಿತ್ರದುರ್ಗ, (ಅ.30) : ಚಿಕ್ಕ ವಯಸ್ಸಿನಲ್ಲಿಯೇ ನಟನೆಯ ಮೂಲಕ ಚಿತ್ರರಂಗ ಪ್ರವೇಶಿಸಿದ ಪುನಿತ್‍ರಾಜ್‍ಕುಮಾರ್ ವಿಧಿವಶರಾಗಿರುವುದು ಕೋಟ್ಯಾಂತರ ಅಭಿಮಾನಿಗಳ ಮನಸ್ಸಿಗೆ ನೋವುಂಟಾಗಿದೆ ಎಂದು ಮುರುಘಾಮಠದ ಡಾ.ಶಿವಮೂರ್ತಿ ಶರಣರು ದುಃಖ ವ್ಯಕ್ತಪಡಿಸಿದರು.

ಶಾರದ ಬ್ರಾಸ್‍ಬ್ಯಾಂಡ್ ವತಿಯಿಂದ ಶನಿವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರದ್ದಾಂಜಲಿ ಮೆರವಣಿಗೆಗೆ ಪುನಿತ್ ಭಾವಚಿತ್ರಕ್ಕೆ ಪುಪ್ಪಾರ್ಚನೆ ಸಲ್ಲಿಸಿ ಮಾತನಾಡಿದ ಮುರುಘಾಶರಣರು ಅಮೋಘವಾದ ನಟನೆಯ ಮೂಲಕ ಅಭಿಮಾನಿಗಳಿಂದ ಪವರ್‌ ಸ್ಟಾರ್ ಎಂದು ಕರೆಸಿಕೊಂಡ ಪುನಿತ್‍ರಾಜ್‍ಕುಮಾರ್ ಅಗಲಿಕೆ ಕರುನಾಡನ್ನೆ ದುಃಖದಲ್ಲಿ ಮುಳುಗಿಸಿದೆ. ಭಗವಂತ ಅವರ ಕುಟುಂಬಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸಿದರು.

ಸುಮಾರು ಮೂವತ್ತು ಚಿತ್ರಗಳಲ್ಲಿ ನಟಿಸಿರುವ ಪುನಿತ್‍ರಾಜ್‍ಕುಮಾರ್ ಸರಳ ಸಜ್ಜನಿಕೆಯನ್ನು ಮೈಗೂಡಿಸಿಕೊಂಡಿದ್ದರು. ತಾನೊಬ್ಬ ಮೇರುನಟ ಎಂದು ಎಲ್ಲಿಯೂ ಗರ್ವದಿಂದ ಬೀಗಲಿಲ್ಲ. ಅವರಲ್ಲಿರುವ ವಿನಯತೆ ಈ ಮಟ್ಟಕ್ಕೇರಲು ನೆರವಾಯಿತು ಎಂದು ಶರಣರು ದುಃಖಭರಿತರಾದರು.

ಶಾರದ ಬ್ರಾಸ್‍ಬ್ಯಾಂಡ್‍ನ ಎಸ್.ವಿ.ಗುರುಮೂರ್ತಿ, ಜಿ.ಸಾಯಿಪ್ರಸಾದ್, ನಗರಸಭೆ ಮಾಜಿ ಅಧ್ಯಕ್ಷರುಗಳಾದ ಹೆಚ್.ಸಿ.ನಿರಂಜನಮೂರ್ತಿ, ಹೆಚ್.ಮಂಜಪ್ಪ, ಜೆಡಿಎಸ್.ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ನಗರಸಭೆ ಮಾಜಿ ಉಪಾಧ್ಯಕ್ಷ ಬಿ.ರಾಮಜ್ಜ, ತಿಪ್ಪೇಸ್ವಾಮಿ, ರುದ್ರೇಶ್, ಪಿ.ಸಿ.ವೀರಣ್ಣ, ಕಾಂಗ್ರೆಸ್ ಮುಖಂಡ ಚಿದಾನಂದಮೂರ್ತಿ ಇನ್ನು ಮೊದಲಾದವರು ಈ ಸಂದರ್ಭದಲ್ಲಿದ್ದರು.

ಭಾವಪೂರ್ಣ ಶ್ರದ್ದಾಂಜಲಿ ಮೆರವಣಿಗೆ ರಂಗಯ್ಯನಬಾಗಿಲು, ದೊಡ್ಡಪೇಟೆ, ಚಿಕ್ಕಪೇಟೆ, ಬುರುಜನಹಟ್ಟಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿತು. ಶಾರದ ಬ್ರಾಸ್‍ಬ್ಯಾಂಡ್‍ನ ಕಲಾವಿದರು ಡಾ.ರಾಜ್ ಮತ್ತು ಪುನಿತ್‍ರವರ ಅಮರ ಗೀತೆಗಳನ್ನು ಹಾಡಿ ಶ್ರದ್ದಾಂಜಲಿ ಸಲ್ಲಿಸಿದರು.

ಶ್ರದ್ದಾಂಜಲಿ ಮೆರವಣಿಗೆ ಸಾಗಿದ ರಸ್ತೆಯ ಎರಡು ಬದಿಗಳಲ್ಲಿ ಅಭಿಮಾನಿಗಳು ನಿಂತು ಸಂತಾಪ ಸೂಚಿಸಿದರು.

ಫೋಟೋ ವಿವರಣೆ: ಶಾರದ ಬ್ರಾಸ್‍ಬ್ಯಾಂಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಾವಪೂರ್ಣ ಶ್ರದ್ದಾಂಜಲಿ ಮೆರವಣಿಗೆಯಲ್ಲಿ ಮುರುಘಾಮಠದ ಡಾ.ಶಿವಮೂರ್ತಿ ಶರಣರು ಪುನಿತ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.    ಫೋಟೋ-1.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!