ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್
ಚಿತ್ರದುರ್ಗ: ದಿನಗೂಲಿ ಮತ್ತು ಕ್ಷೇಮಾಭಿವೃದ್ದಿ ನೌಕರರ ಸಭೆ ಅ.31 ರಂದು ಬೆಳಿಗ್ಗೆ 11 ಗಂಟೆಗೆ ರೋಟರಿ ಬಾಲಭವನ ಸಮೀಪವಿರುವ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಕಚೇರಿಯಲ್ಲಿ ನಡೆಯಲಿದೆ.
ಜಿಲ್ಲೆಯ ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ದಿನಗೂಲಿ ನೌಕರರಿಗೆ ಕಳೆದ ಏಪ್ರಿಲ್‍ನಿಂದ ವೇತನ ಪಾವತಿಯಾಗಿರುವುದಿಲ್ಲ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆದಿದ್ದು, ತಕ್ಷಣವೇ ವೇತನ ನೀಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದರೂ ಇದುವರೆವಿಗೂ ವೇತನ ಪಾವತಿಯಾಗಿರುವುದಿಲ್ಲ. ದಿನಗೂಲಿ ನೌಕರರ ಮೇಲೆ ದೌರ್ಜನ್ಯ ನಡೆಸುವ ಅಧಿಕಾರಿಗಳ ವಿರುದ್ದ ಧರಣಿ ನಡೆಸುವ ದಿನಾಂಕವನ್ನು ನಿಗಧಿಪಡಿಸಲಾಗುವುದು. ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳು ಹಾಗೂ ಇನ್ನಿತರೆ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು.
ಹೊಸದಾಗಿ ಸರ್ಕಾರ ನೀಡಿರುವ ತುಟ್ಟಿ ಭತ್ಯೆ, ವೇತನ ಪಾವತಿ ಮಾಡದಿರುವ ಬಗ್ಗೆ ಕ್ರಮ ವಹಿಸಲಾಗುತ್ತದೆ. ಎಲ್ಲಾ ದಿನಗೂಲಿ, ಕ್ಷೇಮಾಭಿವೃದ್ದಿ ನೌಕರರು ತಪ್ಪದೆ ಸಭೆಗೆ ಹಾಜರಾಗುವಂತೆ ಜಿಲ್ಲಾಧ್ಯಕ್ಷರಾದ ನಾಗರಾಜ್ ಸಂಗಂ ವಿನಂತಿಸಿದ್ದಾರೆ.