Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ದೋಸೆ ಹಬ್ಬ :  ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ

Facebook
Twitter
Telegram
WhatsApp

ದಾವಣಗೆರೆ, ಡಿ.01 : ದಾವಣಗೆರೆ ಬೆಣ್ಣೆದೋಸೆಗೆ ಮಾರು ಹೋಗದವರಿಲ್ಲ, ಈ ಬೆಣ್ಣೆದೋಸೆಗೆ ಬ್ರಾಂಡಿಂಗ್ ಮಾಡುವ ಮೂಲಕ ಪ್ರವಾಸೋದ್ಯಮದ ಜೊತೆಗೆ ಜೋಡಿಸುವ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಕಲ್ಪಿಸಲು ಕರೆಯಲಾದ ದಾವಣಗೆರೆ ನಗರದ ಬೆಣ್ಣೆದೋಸೆ ಹೋಟೆಲ್‍ಗಳ ಮಾಲೀಕರು ಮತ್ತು ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಾವಣಗೆರೆ ಬೆಣ್ಣೆದೋಸೆಗೆ ರಾಜ್ಯದಲ್ಲಿ ತನ್ನದೇ ಆದಂತಹ ಹೆಸರಿದ್ದು ಇದನ್ನು ಅಂತರರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ಜಿಲ್ಲೆಯ ಹೆಸರನ್ನು ಹೆಚ್ಚಿಸಬೇಕಿದ್ದು ಇಲ್ಲಿನ ಜನರಿಗೆ ಹೆಚ್ಚಿನ ಉದ್ಯೋಗ ಒದಗಿಸುವ ಚಿಂತನೆಯನ್ನು ಮಾಡಲಾಗಿದೆ ಎಂದರು.

ದಾವಣಗೆರೆ ಬೆಣ್ಣೆದೋಸೆಗೆ ಅದರದೇ ಆದಂತಹ ಹೆಸರಿದ್ದು ದೋಸೆಗೆ ಬಳಸುವ ಆಹಾರಧಾನ್ಯಗಳು ಮತ್ತು ಮಾಡುವ ವಿಧಾನಗಳ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ಮೂಲಕ ಗುಣ್ಣಮಟ್ಟದ ಖಾತರಿಯನ್ನು ಜನರಿಗೆ ಕಲ್ಪಿಸಬೇಕಾಗಿದೆ. ದಾವಣಗೆರೆ ನಗರ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಸಂಪರ್ಕ ಹೊಂದಿದ್ದು ಗೋವಾ, ಮಹಾರಾಷ್ಟ್ರಕ್ಕೆ ಹೋಗುವ ಪ್ರವಾಸಿಗರು, ಅಂತರರಾಜ್ಯ ಪ್ರಯಾಣಿಕರು ಸಹ ದಾವಣಗೆರೆಯಲ್ಲಿ ಬೆಣ್ಣೆದೋಸೆ ಸವಿಯುವಂತೆ ಮಾಡುವುದು ಜಿಲ್ಲಾಡಳಿತದ ಉದ್ದೇಶವಾಗಿದ್ದು ರುಚಿಕರ, ಶುಚಿಕರ, ಗುಣಮಟ್ಟದ ದೋಸೆ ಪೂರೈಕೆ ಮಾಡುವುದು ಪ್ರಮುಖ ಉದ್ದೇಶವಾಗಿದೆ ಎಂದರು.
ಬೆಣ್ಣೆದೋಸೆ ಹೋಟೆಲ್‍ಗಳಿಗೆ ಪ್ರಮಾಣ ಪತ್ರ; ಬೆಣ್ಣೆದೋಸೆ ಹೋಟೆಲ್‍ಗಳಿಗೆ ಗುಣ್ಣಮಟ್ಟದ ಖಾತರಿಯನ್ನು ಒದಗಿಸಲು ಆಹಾರ ಸುರಕ್ಷತಾ ಕಾಯಿದೆಯನ್ವಯ ಪರಿಶೀಲನೆ ನಡೆಸಿ ದೋಸೆಗೆ ಬಳಸುವ ಧಾನ್ಯಗಳು, ಬೆಣ್ಣೆ, ಎಣ್ಣೆ ಮತ್ತು ಇತರೆ ವಸ್ತುಗಳು, ಅಲ್ಲಿನ ಆರೋಗ್ಯವಂತ ಸಿಬ್ಬಂದಿಗಳ ತಪಾಸಣೆ ಸೇರಿದಂತೆ ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ಮಾನದಂಡಗಳನ್ನು ಪರಿಶೀಲಿಸಿ ಜಿಲ್ಲಾಡಳಿತದಿಂದ ಬ್ರಾಂಡಿಂಗ್ ಪ್ರಮಾಣ ಪತ್ರವನ್ನು ನೀಡುವ ಮೂಲಕ ಪ್ರವಾಸೋದ್ಯಮಕ್ಕೆ ಈ ಹೋಟೆಲ್‍ಗಳನ್ನು ಜೋಡಣೆ ಮಾಡಲಾಗುತ್ತದೆ. ಪ್ರಮಾಣ ಪತ್ರ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಪಾಲಿಕೆ ಆಯುಕ್ತರು, ಆಹಾರ ಸುರಕ್ಷತಾ ಕಾಯಿದೆ ಅಂಕಿತ ಅಧಿಕಾರಿಗಳು, ಸ್ಮಾರ್ಟ್‍ಸಿಟಿ ವ್ಯವಸ್ಥಾಪಕ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ಒಳಗೊಂಡ ಸಮಿತಿ ರಚಿಸಿ ಅಧ್ಯಯನ ವರದಿ ನೀಡಲು ತಿಳಿಸಲಾಗಿದೆ.

ದೋಸೆ ಹಬ್ಬ; ದಾವಣಗೆರೆ ಬೆಣ್ಣೆದೋಸೆಯ ರುಚಿಯನ್ನು ಸವಿಯುವಂತೆ ಮಾಡಲು ವಿಶೇಷ ಕಾರ್ಯಕ್ರಮ ಮಾಡಲು ಉದ್ದೇಶಿಸಿದ್ದು ಇದೇ ಡಿಸೆಂಬರ್‍ನ ಮೂರನೇ ವಾರದ ಅಂತ್ಯದಲ್ಲಿ ದೋಸೆ ಹಬ್ಬವನ್ನು ಆಚರಣೆ ಮಾಡುವ ಮೂಲಕ ದಾವಣಗೆರೆ ದೋಸೆಗೆ ಮೆರಗು ನೀಡಲಾಗುತ್ತಿದೆ. ಇಲ್ಲಿನ ದೋಸೆಗೆ ಅಂತರರಾಜ್ಯ ಮಟ್ಟದಲ್ಲಿಯು ರುಚಿಯನ್ನು ತೋರಿಸಲು ದೆಹಲಿ, ಪಶ್ಚಿಮ ಬಂಗಾಲ, ಉತ್ತರಪ್ರದೇಶ ಸೇರಿದಂತೆ ಉತ್ತರದ ರಾಜ್ಯಗಳಲ್ಲಿ ನಡೆಯುವ ವಿಶೇಷ ಉತ್ಸವ, ಸಮ್ಮೇಳನಗಳಿಗೆ ಇಲ್ಲಿನ ಹೋಟೆಲ್ ಮಾಲಿಕರನ್ನು ಪ್ರತಿನಿಧಿಯನ್ನಾಗಿ ಕಳುಹಿಸುವ ಮೂಲಕ ಇಲ್ಲಿನ ದೋಸೆ ರುಚಿಯನ್ನು ಸವಿಯುವಂತೆ ಮಾಡಲಾಗುತ್ತದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ದಾವಣಗೆರೆಯ ಪ್ರತಿಷ್ಟಿತ ಬೆಣ್ಣೆದೋಸೆ ಹೋಟೆಲ್ ಮಾಲಿಕರುಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕನ್ನಡ ಉಳಿಸುವ ಪ್ರಯತ್ನದಲ್ಲಿ ನಾವೇನು ಮಾಡುತ್ತಿದ್ದೇವೆ ?  ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್

ಚಿತ್ರದುರ್ಗ, ನವೆಂಬರ್. 01 : ಕನ್ನಡವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ನಾವೇನು ಮಾಡುತ್ತಿದ್ದೇವೆ! ಏನು ಮಾಡಬೇಕು? ಎನ್ನುವ ಪ್ರಶ್ನೆಯನ್ನು ಅಭಿಮಾನವಿರುವ ಪ್ರತಿಯೊಬ್ಬ ಕನ್ನಡಿಗನೂ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ

ಚಿತ್ರದುರ್ಗದ ಅಳಿಯ ಆಗುತ್ತಿದ್ದಾರೆ ಚಿತ್ರನಟ ಡಾಲಿ ಧನಂಜಯ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 01 : ಸ್ಯಾಂಡಲ್‌ವುಡ್‌ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್, ಹ್ಯಾಂಡಸಮ್ ಹಂಕ್ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದಾರೆ. ಯಾವಾಗ ಮದುವೆ ಅಂತ ಕೇಳುವಾಗೆಲ್ಲ ಅಯ್ಯೋ ಹುಡುಗಿನೇ ಸಿಕ್ಕಿಲ್ಲ ಅಂತಿದ್ದ ಡಾಲಿ ಧನಂಜಯ

ಈ ರಾಶಿಯವರಿಗೆ ವಯಸ್ಸು ಮೀರಿದರೂ ಕಂಕಣ ಬಲ ಕೂಡಿಬಂತು

ಈ ರಾಶಿಯವರಿಗೆ ವಯಸ್ಸು ಮೀರಿದರೂ ಕಂಕಣ ಬಲ ಕೂಡಿಬಂತು, ಈ ರಾಶಿಯವರು ಇನ್ಮುಂದೆ ಇನ್ನೊಬ್ಬರಿಗೆ ಸಾಲ ಕೊಡುವವರಂತಾರಾಗುತ್ತಿರಿ, ಶುಕ್ರವಾರ- ರಾಶಿ ಭವಿಷ್ಯ ನವೆಂಬರ್-1,2024 ಲಕ್ಷ್ಮಿ ಪೂಜಾ,ದೀಪಾವಳಿ ಸೂರ್ಯೋದಯ: 06:18, ಸೂರ್ಯಾಸ್ತ : 05:40 ಶಾಲಿವಾಹನ

error: Content is protected !!