Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಮೂರು ಲಕ್ಷ ಹಣ ಕದ್ದು ಕಳ್ಳರು ಪರಾರಿ : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

---Advertisement---

 

ಸುದ್ದಿಒನ್, ಹಿರಿಯೂರು, ಡಿಸೆಂಬರ್.01 :  ಕಾರಿನಲ್ಲಿದ್ದ ಹಣವನ್ನು ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಕದ್ದೊಯ್ದ ಪ್ರಕರಣ ನಗರದ ಲಕ್ಷ್ಮಮ್ಮ ಬಡಾವಣೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ನಗರದ ಕೃಷ್ಣಕುಮಾರ್ ಎಂಬುವರು ಬ್ಯಾಂಕ್ ನಿಂದ 3,5,000 ನಗದು ಹಣವನ್ನು ಬ್ಯಾಗಿನಲ್ಲಿ ಮನೆಗೆ ತಂದಿದ್ದಾರೆ. ಇವರನ್ನು ಬೈಕ್ ನಲ್ಲಿ ಹಿಂಬಾಲಿಸಿದ ಇಬ್ಬರು ಕಳ್ಳರು ಹಣದ ಬ್ಯಾಗನ್ನು ಕದ್ದು ಪರಾರಿಯಾಗಿದ್ದಾರೆ.

ಕಳ್ಳತನವಾದ ಘಟನೆಯು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದ್ದು, ಈ ಕುರಿತು ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment