Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಭಿವೃದ್ಧಿಯತ್ತ ಸಾಗುತ್ತಿರುವ ಕೋಟೆನಾಡಿಗೆ ಬರಲಿದೆಯಾ ವಿಮಾನ ನಿಲ್ದಾಣ..?

---Advertisement---

 ಸುದ್ದಿಒನ್,  ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಈಗಾಗಲೇ ಅಭಿವೃದ್ಧಿಯ ಪತದತ್ತ ಸಾಗುತ್ತಿದೆ. ವಾಣಿ ವಿಲಾಸ ಜಲಾಶಯಕ್ಕೆ ಭದ್ರಾ ನೀರು ಹರಿಸುವ ಯೋಜನೆ, ಚಳ್ಳಕೆರೆಯ ನಾಯಕನಹಟ್ಟಿ ಬಳಿ ಡಿಆರ್ಡಿಓ ಪ್ರಾಜೆಕ್ಟ್, ಚಿತ್ರದುರ್ಗ ಮೂಲಕ ( ತುಮಕೂರು- ಚಿತ್ರದುರ್ಗ- ದಾವಣಗೆರೆ) ನೇರ ರೈಲು ಸಂಪರ್ಕ ಯೋಜನೆ, ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಂಜೂರು ಆಗುತ್ತಿದೆ. ಈ ಬೆನ್ನಲ್ಲೇ ಕೋಟೆನಾಡಿನ ಮಂದಿಗೆ ಮತ್ತಷ್ಟು ಸಂತಸದ ಸುದ್ದಿ ಸಿಕ್ಕಿದೆ. ಅದುವೆ ಹಿರಿಯೂರು ಅಥವಾ ಚಿತ್ರದುರ್ಗ ಆಸುಪಾಸಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆಯಂತೆ.

ಸಂಭಾವ್ಯ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತುಮಕೂರು – ಚಿತ್ರದುರ್ಗ ನಡುವೆ ಸ್ಥಳ ಹುಡುಕಾಟ ಕೆಲಸಗಳು ಪ್ರಾರಂಭವಾಗಿವೆ ಎಂಬ ಬಗ್ಗೆ ವರದಿಯಾಗಿದೆ. ಹೊಸ ವಿಮಾನ ನಿಲ್ದಾಣಕ್ಕೆ ಸೂಕ್ತ ಸ್ಥಳ ಗುರುತಿಸುವ ಪ್ರಕ್ರಿಯೆ ಆರಂಭಿಕ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ನೊಂದಿಗೆ 60 ವರ್ಷಗಳ ಗುತ್ತಿಗೆ ವಿಸ್ತರಣೆ ಚರ್ಚೆಯ ಸಂದರ್ಭದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ನಿರ್ಧಾರವನ್ನು ತಿಳಿಸಲಾಗಿದೆ ಎಂದು ವರದಿಯಾಗಿದ್ದು, ಸರ್ಕಾರದ ಪ್ರಸ್ತಾವನೆಗೆ ಬಿಐಎಎಲ್ ಕೂಡ ಆಸಕ್ತಿ ತೋರಿಸಿದೆ ಎಂಬುದು ಗೊತ್ತಾಗಿದೆ.

ಒಂದೇ ನಗರದಲ್ಲಿ ಅನೇಕ ವಿಮಾನ ನಿಲ್ದಾಣಗಳನ್ನು ನಿರ್ಮಿಸಿರುವ ಮುಂಬೈ ಹಾಗೂ ಗೋವಾದಂತಹ ನಗರಗಳನ್ನು ನಿದರ್ಶನವಾಗಿ ತೆಗೆದುಕೊಳ್ಳಬಹುದು. ಆದರೆ, ಪ್ರಸ್ತುತ ವಿಮಾನ ನಿಲ್ದಾಣವಿರುವ 150 ಕಿಲೋಮೀಟರ್ ಅಂತರದಲ್ಲಿ ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಮಾರ್ಗಸೂಚಿಗಳ ಪ್ರಕಾರ, ಯಾವುದೇ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಸ್ಥಾಪನೆಯನ್ನು ಅನುಮತಿಸಲಾಗುವುದಿಲ್ಲ. ಆಗೊಮ್ಮೆ, ಆ ಅಂತರದೊಳಗೆ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಿಸಿದರೆ, ಎರಡು ವಿಮಾನ ನಿಲ್ದಾಣಗಳ ಮಧ್ಯೆ ಏರ್ ಟ್ರಾಫಿಕ್ ಸೇರಿದಂತೆ ವಿವಿಧ ತೊಂದರೆಗಳು ಬರುತ್ತಿವೆ.

ಇಂತಹ ಸಮಸ್ಯೆಯನ್ನು ನಿಭಾಯಿಸಿ, ಬೆಂಗಳೂರು ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗುವ ನಿಟ್ಟಿನಲ್ಲಿ ಹೊಸ ಏರ್ಪೋರ್ಟ್ ನಿರ್ಮಾಣಕ್ಕೆ ತುಮಕೂರು – ಚಿತ್ರದುರ್ಗ ನಡುವಿನ ಮಾರ್ಗವೇ ಸೂಕ್ತ ಸ್ಥಳವಾಗಿದೆ ಎಂದು ತಿಳಿದುಬಂದಿದೆ. ಎಚ್‌ಎಎಲ್‌ನಲ್ಲಿ ಹಳೆಯ ವಿಮಾನ ನಿಲ್ದಾಣವನ್ನು ಪುನರಾರಂಭಿಸುವುದಕ್ಕೆ ಆರಂಭದಲ್ಲಿ ಪರಿಗಣಿಸಲಾಗಿತ್ತು. ಆದರೆ, ನಾನಾ ಕಾರಣಗಳಿಗೆ ಅದನ್ನು ಕೈ ಬಿಡಲಾಯಿತು. ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಾದರೆ, ರಾಜ್ಯ ಸರ್ಕಾರ ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ. ನಿಲ್ದಾಣಕ್ಕೆ ಸೂಕ್ತ ಸ್ಥಳವನ್ನು ಹುಡುಕಾಟ ನಡೆಸಬೇಕು. ಒಂದೊಮ್ಮೆ ಕೃಷಿ ಜಮೀನು ಇದ್ದರೆ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಬೇಕು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment