Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದುಶ್ಚಟಗಳಿಂದ ದೂರವಿದ್ದರೆ ಹೃದಯಾಘಾತ ತಡೆಗಟ್ಟಬಹುದು : ಹೃದಯ ತಜ್ಞ ಡಾ.ಶಾಂತಕುಮಾರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.05  : ಆಧುನಿಕ ಯುಗದಲ್ಲಿ ಒತ್ತಡದ ಜೀವನದಲ್ಲಿ ಎಲ್ಲರೂ ಬದುಕುತ್ತಿರುವುದರಿಂದ ಹೃದಯಾಘಾತ ಎನ್ನುವುದು ಸಾಮಾನ್ಯವಾಗಿದೆ ಎಂದು ಎಸ್.ಎಸ್.ನಾರಾಯಣ ಆಸ್ಪತ್ರೆಯ ಹೃದಯ ತಜ್ಞ ಡಾ.ಶಾಂತಕುಮಾರ್ ತಿಳಿಸಿದರು.

ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜ, ಎಸ್.ಎಸ್.ನಾರಾಯಣ ಆಸ್ಪತ್ರೆ ದಾವಣಗೆರೆ ಇವರ ಸಹಯೋಗದೊಂದಿಗೆ ಸಿಟಿ ಕ್ಲಬ್ ಬಿಲ್ಡಿಂಗ್‍ನಲ್ಲಿರುವ  ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಕಚೇರಿಯಲ್ಲಿ ಕೆಲವು ದಿನಗಳ ಹಿಂದೆ ನಡೆದ ಉಚಿತ ಹೃದಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಅತಿಯಾದ ಧೂಪಪಾನ, ಮದ್ಯಪಾನ ಕೂಡ ಹೃದಯಾಘಾತಕ್ಕೆ ಆಹ್ವಾನವಿದ್ದಂತೆ. ಹಾಗಾಗಿ ದುಶ್ಚಟಗಳಿಂದ ದೂರವಿರುವ ಮೂಲಕ ಹೃದಯಾಘಾತವನ್ನು ತಡೆಗಟ್ಟಬಹುದಾಗಿದೆ. ಹಿಂದಿನ ಕಾಲದಲ್ಲಿ ದೈಹಿಕ ಶ್ರಮವಿತ್ತು. ಈ ಎಲ್ಲದಕ್ಕೂ ಯಂತ್ರಗಳನ್ನು ಬಳಸುತ್ತಿರುವುದರಿಂದ ಮಾನವ ಸೋಮಾರಿಯಾಗುತ್ತಿದ್ದಾನೆ. ರಕ್ತದೊತ್ತಡ, ಸಕ್ಕರೆ ಕಾಯಿಲೆ ಇವುಗಳು ಹೆಚ್ಚು ಅಪಾಯಕಾರಿ. ಸದೃಢ ಆರೋಗ್ಯಕ್ಕಾಗಿ ಪ್ರತಿನಿತ್ಯ ಕನಿಷ್ಟ ಒಂದು ಗಂಟೆಯಾದರೂ ಯೋಗ, ಧ್ಯಾನ ಮಾಡಬೇಕು. ಜೊತೆಗೆ ಬೆಳಿಗ್ಗೆ ಸಂಜೆ ವೇಳೆ ವಾಯುವಿಹಾರ ಪದ್ದತಿ ಅಳವಡಿಸಿಕೊಂಡರೆ ಸೂಕ್ತ ಎಂದು ಡಾ.ಶಾಂತಕುಮಾರ್ ಹೇಳಿದರು.

ಎದೆನೋವು, ಉಸಿರಾಟದ ತೊಂದರೆ, ಅನಿಯಮಿತ ಹೃದಯ ಬಡಿತ, ಭುಜದಲ್ಲಿ ನೋವು, ದುರ್ಬಲತೆ, ತಲೆಸುತ್ತುವಿಕೆ, ಬೆವರುವುದು, ವಾಕರಿಕೆಯಾಗುವ ಲಕ್ಷಣವಿರುವವರನ್ನು ತಪಾಸಣೆ ನಡೆಸಿ ಹೃದಯ ತಪಾಸಣಾ ಶಿಬಿರದಲ್ಲಿ ಸೂಕ್ತ ಸಲಹೆಗಳನ್ನು ನೀಡಲಾಯಿತು.

ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಜಿ.ಚಿದಾನಂದಪ್ಪ, ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ, ಉಪಾಧ್ಯಕ್ಷರುಗಳಾದ ನಾಗರಾಜ್ ಸಂಗಮ್, ಲಾಯರ್ ವಿಶ್ವನಾಥ್ ಇನ್ನು ಮೊದಲಾದವರು ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!