ಮುಖ್ಯಮಂತ್ರಿ ಭೇಟಿ ಮಾಡಿದ ವ್ಯಕ್ತಿಯ ತನಿಖೆಗೆ ಯತ್ನಾಳ್ ಆಗ್ರಹ : ಅಷ್ಟಕ್ಕೂ ಪೀರ್ ಯಾರು…?

suddionenews
1 Min Read

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಮುಸ್ಲಿಂ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಹಾಸ್ಮೀ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಕೇಂದ್ರ ತಂಡಗಳ ಮುಖಾಂತರ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.

ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಹಾಸ್ಮೀ ಜೊತೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಹಂಚಿಕೊಂಡಿದ್ದರು. ಈ ಸಂಬಂಧ ಪತ್ರ ಬರೆದಿರುವ ಯತ್ನಾಳ್, ಭಯೋತ್ಪಾದಕ ಸಂಘಟನೆ ಐಸಿಸ್ ಮೇಲೆ ಸಹಾನುಭೂತಿ ಹೊಂದಿರುವ ತನ್ವೀರ್ ಪೀರಾ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಹಂಚಿಕೊಂಡ ಘಟನೆಯನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಪೀರಾ ಅವರು ಈ ಹಿಂದೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿರುವ ರ್ಯಾಡಿಕಲ್ ಇಸ್ಲಾಮಿಕ್ ಔಟ್‌ಫಿಟ್ ನಾಯಕರನ್ನು ಭೇಟಿಯಾಗಿದ್ದರು ಎಂಬುದು ನನ್ನ ಅರಿವಿಗೆ ಬಂದಿದೆ. ಇನ್ನೂ ಆತಂಕಕಾರಿ ಸಂಗತಿಯೆಂದರೇ ಪೀರಾ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತಿರುವುದು ಇದೇ ಮೊದಲಲ್ಲ. ಅವರು ಹಿಂದೆ ಅನೇಕ ಬಾರಿ ಭೇಟಿಯಾಗಿದ್ದರು. ಪೀರಾ ಅವರು ನಮ್ಮ ರಾಷ್ಟ್ರದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಮುಸ್ಲಿಂ ರಾಷ್ಟ್ರಗಳಿಂದ ಹಣವನ್ನು ತರುತ್ತಿದ್ದಾರೆ ಎಂಬ ನಂಬಲರ್ಹ ಮಾಹಿತಿ ನನಗೆ ದೊರೆತಿದೆ.

ಮುಖ್ಯಮಂತ್ರಿಗಳು ತಮ್ಮ ವೈಯಕ್ತಿಕ ಭದ್ರತೆ ಮತ್ತು ಗುಪ್ತಚರ ಸಲಹೆಯನ್ನು ಕಡೆಗಣಿಸಿರುವುದು ಮತ್ತು ರಾಜಕೀಯ ಅಜೆಂಡದಿಂದ ಉದ್ದೇಶಪೂರ್ವಕವಾಗಿ ಪೀರಾ ಅವರನ್ನು ಭೇಟಿ ಮಾಡಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ. ಪೀರಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದನ್ನು ತಪ್ಪಿಸಲು ಸ್ಥಳೀಯ ಪೊಲೀಸರು ರಾಜ್ಯ ಸರ್ಕಾರದೊಂದಿಗೆ ಶಾಮೀಲಾಗಿದ್ದಾರೆ ಎಂದು ನಾನು ಶಂಕಿಸಿರುವ ಕಾರಣ, ಪೀರಾ ಅವರನ್ನು ರಾಷ್ಟ್ರೀಯ ಸಂಸ್ಥೆಗಳಿಂದ ಕೂಲಂಕಷವಾಗಿ ತನಿಖೆ ಮಾಡುವುದು ನಮ್ಮ ದೇಶದ ಹಿತದೃಷ್ಟಿಯಿಂದ ಉತ್ತಮವಾಗಿದೆ  ಎಂದು ಪತ್ರ ಬರೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *