ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಡಿ. 07. ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ (ರಿ), ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರನಾಯಕ ಎಸ್.ನಿಜಲಿಂಗಪ್ಪರವರ 121ನೇ ಜನ್ಮದಿನಾಚರಣೆ ಮತ್ತು ಜಿಲ್ಲೆಯ ನೂತನ ಶಾಸಕರುಗಳಿಗೆ ಅಭಿನಂದನಾ ಸಮಾರಂಭವೂ ಡಿ.10ರ ಬೆಳ್ಳಿಗೆ 11ಕ್ಕೆ ಸಿಬಾರದ ಎಸ್.ಎನ್.ಸ್ಮಾರಕದ ಪುಣ್ಯಭೂಮಿಯಲ್ಲಿ ನಡೆಯಲಿದೆ ಎಂದು ಟ್ರಸ್ಟ್‍ನ ಗೌರವ ಕಾರ್ಯದರ್ಶಿಗಳಾದ ಹೆಚ್.ಹನುಮಂತಪ್ಪ ತಿಳಿಸಿದ್ದಾರೆ.

ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಎಸ್.ಎನ್.ಟ್ರಸ್ಟ್‍ನ ಅಧ್ಯಕ್ಷರು, ಮಾಜಿ ಸಚಿವರು ಹಾಲಿ ಶಾಸಕರಾದ ಶಾಮನೂರು ಶಿವಶಂಕರಪ್ಪ ವಹಿಸಲಿದ್ದಾರೆ. ಎಸ್.ಎನ್.ಟ್ರಸ್ಟ್‍ನ ಉಪಾಧ್ಯಕ್ಷರಾದ ಪ್ರೋ.ಎಸ್.ಎನ್.ಕಿರಣ್ ಶಂಕರ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಯೋಜನಾ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ನೇರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಶಾಸಕರುಗಳಾದ ಕೆ.ಸಿ.ವಿರೇಂದ್ರ, ಬಿ.ಜಿ.ಗೋವಿಂದಪ್ಪ, ಎನ್.ವೈ ಗೋಪಾಲಕೃಷ್ಣ, ಎಂ.ಚಂದ್ರಪ್ಪ, ಟಿ.ರಘುಮೂರ್ತಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್‍ರವರನ್ನು ಅಭಿನಂದಿಸಲಾಗುವುದು ಎಂದು ಎಸ್.ಷಣ್ಮುಖಪ್ಪ ಮತ್ತು ತಾಜ್‍ಪೀರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















