Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಟಿ ರವಿ ನೀಡಿದ ಅಂಡಮಾನ್ ಜೈಲು ಭೇಟಿ ಆಫರ್ ಬಗ್ಗೆ ಪ್ರಿಯಾಂಕ್ ಖರ್ಗೆ ಏನಂದ್ರು..?

---Advertisement---

ಆತ್ಮೀಯರಾದ ಪ್ರಿಯಾಂಕ್‌ ಖರ್ಗೆ ಅವರೇ, ತಾಯಿ ಭಾರತಿಯ ಮಡಿಲಿನಲ್ಲಿ ಜನಿಸಿದ ಮಹಾನ್ ರಾಷ್ಟ್ರೀಯವಾದಿ, ಕರಿನೀರ ವೀರ, ಹುತಾತ್ಮ ವೀರ್ ಸಾವರ್ಕರ್ ಅವರು, ಬ್ರಿಟಿಷರಿಂದ ಕಠಿಣ ಕಾರಾಗ್ರಹ ಶಿಕ್ಷೆಗೊಳಪಡಿಸುವ ತೀರ್ಪಿನಂತೆ, ಘೋರ ಕರಿನೀರಿನ ಶಿಕ್ಷೆ ಅನುಭವಿಸಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇರುವ ಸೆಲ್ಯುಲರ್ ಜೈಲಿಗೆ ಭೇಟಿ ನೀಡಲು ನಿಮ್ಮನ್ನು ಆಹ್ವಾನಿಸುತ್ತೇನೆ. ಅಂದ ಹಾಗೆ ನಿಮ್ಮ ಪ್ರವಾಸದ ಸಂಪೂರ್ಣ ಖರ್ಚುವೆಚ್ಚ ನಾನೇ ಭರಿಸುತ್ತೇನೆ ಎಂದಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಟಿ ರವಿ ಅವರ ಸವಾಲನ್ನು ಸ್ವೀಕರಿಸಿದ್ದಾರೆ.

ಸಿ ಟಿ ರವಿ ಅವರು ಫಂಡ್ ಮಾಡುವುದರಿಂದ ನಾನು ಹೋಗಿ ಸಾವರ್ಕರ್ ಇದ್ದ ಜೈಲಿಗೆ ಹೋಗಿ ನೋಡಿಕೊಂಡು ಬರುತ್ತೀನಿ. ಆದರೆ ಈಗ ರಾಜ್ಯದಲ್ಲಿ ಬರದ ಪರಿಸ್ಥಿತಿ ಇದೆ. ಬರ ಪ್ರವಾಸದಲ್ಲಿ ಇದ್ದೇನೆ. ಬರ ಪ್ರವಾಸ ಮುಗಿದ ಮೇಲೆ ಹೋಗಿ ಬರುತ್ತೇನೆ. ಅಲ್ಲಿಯವರೆಗೂ ಆ ಆಫರ್ ಇರುತ್ತದೆಯಾ..? ನನ್ನ ಸಿದ್ದಾಂತ ನನಗೆ ಕ್ಲಿಯರ್ ಇದೆ. ಬಸವ ತತ್ವ, ಅಂಬೇಡ್ಕರ್ ತತ್ವ ಸಿದ್ದಾಂತ ನನ್ನದು.

ಬಿಜೆಪಿಗೆ ಮೂರು – ನಾಲ್ಕು ಪ್ರಶ್ನೆಗಳನ್ನು ಕೇಳುತ್ತೇನೆ.

* ಸಾವರ್ಕರ್ ಬ್ರಿಟಿಷರ ಪಿಂಚಣಿಗೆ ಅರ್ಜಿ ಹಾಕಿರಲಿಲ್ಲವಾ..?

* ವೀರ ಅಂತ ಬಿರುದು ಸಾವರ್ಕರ್ ಗೆ ಕೊಟ್ಟವರು ಯಾರು..?

* ದೇಶ ವಿಭಜನೆ ಮಾಡುವುದಕ್ಕೆ ಮೊದಲು ಪ್ರಸ್ತಾಪ ಮಾಡಿದ್ದು ಯಾರು..? ಎಂದು ಪ್ರಶ್ನೆ ಕೇಳಿದ್ದಾರೆ.

ವಿಧಾನಸಭೆಯಲ್ಲಿ ಹಾಕಿರುವ ಸಾವರ್ಕರ್ ಫೋಟೋವನ್ನು ತೆಗೆಯಲು ಅವಕಾಶ ಸಿಕ್ಕರೆ ನಾನು ಈಗಲೇ ತೆಗೆಯುತ್ತೇನೆ ಎಂದಿದ್ದರು. ಈ ಹೇಳಿಕೆಗೆ ಸಿಟಿ ರವಿ ಆಕ್ರೋಶ ಹೊರ ಹಾಕಿ, ಅಂಡಮಾನ್ ಜೈಲಿನ ಆಫರ್ ನೀಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment