ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್ 08 : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಎಂ. ಭರತ್‍ಕುಮಾರ್ ಅವರನ್ನು ಎಸ್.ಜೆ.ಎಂ. ವಿದ್ಯಾಪೀಠ ಹಾಗೂ ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕರ್ತವ್ಯಗಳಿಂದ ದಿ. 8-12-23ರಿಂದ ತಕ್ಷಣ ಜಾರಿಗೆ ಬರುವಂತೆ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ ಎಂದು ಶ್ರೀಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದೇ ಡಿಸೆಂಬರ್ 5 ರಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಮುರುಘಾಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತವನ್ನು ಮುರುಘಾಮಠದ ಪೀಠಾಧಿಪತಿಗಳು ಮತ್ತು ಎಸ್.ಎಂ ವಿದ್ಯಾಪೀಠದ ಅಧ್ಯಕ್ಷರಿಗೆ ಹಸ್ತಾಂತರಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಕಾರ್ಯನಿರ್ವಹಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಎಂ. ಭರತ್‍ಕುಮಾರ್ ಅವರನ್ನು
ಬಿಡುಗಡೆಗೊಳಿಸಿದ್ದಾರೆ ಎಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಂ. ಭರತ್‍ಕುಮಾರ್ ಅವರು ಶ್ರೀ ಜಗದ್ಗುರು ಮುರುಘರಾಜೇಂದ್ರ ವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ ವರ್ಷ ಡಿಸೆಂಬರ್ 5 ರಂದು ಅಧಿಕಾರ ಸ್ವೀಕರಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















